ADVERTISEMENT

ಶಿಕ್ಷಕರ ವರ್ಗಾವಣಾ ಕಾಯ್ದೆ 2020ಕ್ಕೆ ಶಿಕ್ಷಕರ ವಿರೋಧ, ತಿದ್ದುಪಡಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 12:08 IST
Last Updated 24 ಜೂನ್ 2020, 12:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ಶಿಕ್ಷಕರ ವರ್ಗಾವಣಾ ಕಾಯ್ದೆ 2020 ಕುರಿತು ಶಿಕ್ಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರಿಗೆ ಪತ್ರ ಬರೆದಿದ್ದು ಶಿಕ್ಷಕರ ವರ್ಗಾವಣಾ ಕಾಯ್ದೆ-2020ರಲ್ಲಿ ಕೆಲವು ಅಂಶಗಳಲ್ಲಿ ತಿದ್ದುಪಡಿ ತಂದು ಅಂತಿಮ ನಿಯಮಗಳನ್ನು ರೂಪಿಸಬೇಕೆಂದು ಆಗ್ರಹಿಸಿದ್ದಾರೆ.

ಅಲ್ಲದೆ, ಶೇ.25ಕ್ಕಿಂತ ಹೆಚ್ಚು ಖಾಲಿ ಹುದ್ದೆಗಳಿರುವ ತಾಲೂಕಿನಿಂದ ವರ್ಗಾವಣೆ ಇಲ್ಲವೆಂಬ ಅಂಶ ಅತ್ಯಂತ ಮಾರಕವಾಗಿದೆ. ಶಿಕ್ಷಕ ಭಾದಕ ನಿಯಮವಾಗಿದೆ. ಇದನ್ನು ಸಂಪೂರ್ಣ ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.