ADVERTISEMENT

ಟಿಇಟಿ: 23ರಿಂದ ಅರ್ಜಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 14:32 IST
Last Updated 18 ಅಕ್ಟೋಬರ್ 2025, 14:32 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ಬೆಂಗಳೂರು: ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)’ ಡಿಸೆಂಬರ್‌ 7ರಂದು ನಡೆಯಲಿದ್ದು, ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅ.23 ರಿಂದ ನ.9ರವರೆಗೆ ಅರ್ಜಿ ಸಲ್ಲಿಸಬಹುದು.

ಮಾಹಿತಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವೆಬ್‌ಸೈಟ್‌ www.schooleducation.kar.nic.in ನಲ್ಲಿ  ಪ್ರಕಟಿಸಿರುವ ಸೂಚನೆಗಳನ್ನು ಗಮನಿಸಬೇಕು ಎಂದು ಕೇಂದ್ರೀಕೃತ ದಾಖಲಾತಿ ಘಟಕ ಸೂಚಿಸಿದೆ.

ADVERTISEMENT

‘ಡಿ.31ರ ಒಳಗೆ ಫಲಿತಾಂಶ ಪ್ರಕಟಿಸಲಾಗುವುದು. ನಂತರ ಕಲ್ಯಾಣ ಕರ್ನಾಟಕ ಸೇರಿದಂತೆ 18 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ಟಿಇಟಿ ನಡೆಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ವೇಳೆಗೆ ನೇಮಕಾತಿ ಆದೇಶ ನೀಡಲಾಗುವುದು’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.