ADVERTISEMENT

ಪಠ್ಯದಿಂದ ಟಿಪ್ಪು ಹೊರಕ್ಕೆ: 3 ದಿನದಲ್ಲಿ ನಿರ್ಧಾರ?

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2019, 19:45 IST
Last Updated 28 ಅಕ್ಟೋಬರ್ 2019, 19:45 IST

ಬೆಂಗಳೂರು: ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್‌ ಕುರಿತ ಪಠ್ಯವನ್ನು ತೆಗೆದುಹಾಕುವ ಸಂಬಂಧ ಇತಿಹಾಸ ಪಠ್ಯಪುಸ್ತಕ ರಚನಾ ಸಮಿತಿ ಸಭೆ ಕರೆದು ಮೂರು ದಿನದೊಳಗೆ ವರದಿ ಸಲ್ಲಿಸಲು ಸರ್ಕಾರ ಸೂಚಿಸಿದೆ.

ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್‌ ಅವರು ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರಿಗೆ ಸಲ್ಲಿಸಿದ ಮನವಿ ಮೇರೆಗೆ ಸಚಿವರು ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಈ ಸೂಚನೆ ನೀಡಿದ್ದಾರೆ.

‘ಪಠ್ಯಪುಸ್ತಕ ರಚನಾ ಸಮಿತಿಸಭೆಗೆ ಈ ಶಾಸಕರನ್ನೂ ಆಹ್ವಾನಿಸಿ, ಈ ಪಠ್ಯದ ಅಗತ್ಯತೆ ಹಾಗೂ ಅದನ್ನು
ಉಳಿಸಿಕೊಳ್ಳುವ ಇಲ್ಲವೇ ತೆಗೆದು ಹಾಕುವ ಕುರಿತಂತೆ ಚರ್ಚಿಸಬೇಕು’ ಎಂದು ಸಚಿವರು ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.