
ರಾಷ್ಟ್ರೀಯ, ರಾಜ್ಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ (ಈಗಿನ ಎಂಡಿಎ) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಲೋಕಾಯುಕ್ತ ಪೊಲೀಸರು ಇನ್ನಷ್ಟು ಮಂದಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಮಂಗಳೂರು: ಮ್ಯಾಟ್ರಮೋನಿ ಆನ್‌ಲೈನ್ ವೇದಿಕೆಯಲ್ಲಿ ಯುವತಿಯರನ್ನು ಪರಿಚಯ ಮಾಡಿಕೊಂಡು ಮದುವೆ ಆಗುವುದಾಗಿ ನಂಬಿಸಿ ಹಣ ಪಡೆದು ಒಂಬತ್ತು ಯುವತಿಯರಿಗೆ ವಂಚಿಸಿರುವ ಆರೋಪಿಯನ್ನು ಇಲ್ಲಿಯ ಕಾವೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ (ಎಂಎನ್‌ಆರ್‌ಇಜಿ) ಯೋಜನೆ ರದ್ದುಗೊಳಿಸಿ, ವಿಕಸಿತ ಭಾರತ – ಉದ್ಯೋಗ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತರಿ (ವಿಬಿ – ಜಿ ರಾಮ್ ಜಿ) ಕಾಯ್ದೆ ಜಾರಿಗೊಳಿಸುವ ಪ್ರಕ್ರಿಯೆಯ ಗೊಂದಲದಿಂದಾಗಿ ಗ್ರಾಮೀಣ ಜನರಿಗೆ ಉದ್ಯೋಗ ಖಾತರಿ ನೀಡುವ ಯೋಜನೆಯ ಬಜೆಟ್ ರೂಪಿಸುವ ಪ್ರಕ್ರಿಯೆ ಇನ್ನೂ ನಡೆದಿಲ್ಲ.
ಬೆಳ್ತಂಗಡಿ (ದಕ್ಷಿಣ ಕನ್ನಡ): ಕಾರಿನಲ್ಲಿ ಬಂದ ಮೂವರು ಮುಸುಕುಧಾರಿಗಳು ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿ, ಆಕೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದರು ಎನ್ನಲಾದ ಪ್ರಕರಣ ತಿರುವು ಪಡೆದುಕೊಂಡಿದೆ. ಕಾಲೇಜಿಗೆ ಹೋಗಲು ಇಷ್ಟವಿಲ್ಲದೇ ವಿದ್ಯಾರ್ಥಿನಿಯೇ ಹೆಣೆದ ಕಟ್ಟು ಕಥೆ ಇದು ಎಂಬುದು ತನಿಖೆಯಿಂದ ಬಯಲಾಗಿದೆ.
ಬೆಂಗಳೂರು: 20 ತಿಂಗಳ ಹಿಂದೆಯೇ ಅಧಿಕಾರ ಅವಧಿ ಮುಗಿದಿದ್ದರೂ ಕಾನೂನು ತೊಡಕುಗಳ ಕಾರಣದಿಂದ ಮುಂದೆ ಹೋಗುತ್ತಲೇ ಇದ್ದ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಅಧ್ಯಕ್ಷರ ಚುನಾವಣೆ ಮಾ.6ರಂದು ನಡೆಯುವ ಸಾಧ್ಯತೆ ಇದೆ.
ಬೆಂಗಳೂರು: ‘ನಮ್ಮ ಮೆಟ್ರೊ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯಾದರೂ, ಮಾಲೀಕತ್ವ ಕೇಂದ್ರಕ್ಕೇ ಸೇರಿದೆ. ಇಂತಹ ವಿಷಯಗಳ ಮಾಹಿತಿ ಇಲ್ಲದವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಬಿಜೆಪಿ ನೇಮಿಸಿದೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಟೀಕಿಸಿದರು.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್‌ಡಿಎಲ್) ರಾಯಭಾರಿಯ ಹೊಣೆಯನ್ನು ಮಂಗಳವಾರ ಹೊತ್ತ ನಟಿ ತಮನ್ನಾ ಭಾಟಿಯಾ ಅವರು, ನಿಗಮದ 57 ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದರು.
ನಾನು ಮತ್ತು ಸಿದ್ದರಾಮಯ್ಯ ಅವರು ಕದ್ದು ಮುಚ್ಚಿ ಮಾತನಾಡಿಲ್ಲ. ನಮ್ಮ ಪಕ್ಷದ ವರಿಷ್ಠರು ಸೇರಿಕೊಂಡೇ ಮಾತನಾಡಿದ್ದೆವು‘ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ನಾನು, ಸಿಎಂ ಕದ್ದು ಮುಚ್ಚಿ ಮಾತನಾಡಿಲ್ಲ: ಡಿ.ಕೆ.ಶಿವಕುಮಾರ್
ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಶಾಸಕ ಬೈರತಿ ಬಸವರಾಜ್ ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
‘ಕೆಲವು ದ್ವಿದಳ ಧಾನ್ಯಗಳು ಸೇರಿದಂತೆ ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಿಶಾಲ ಶ್ರೇಣಿಯ ಆಹಾರ ಮತ್ತು ಕೃಷಿ ಉತ್ಪನ್ನಗಳ ಮೇಲಿನ ಸುಂಕವನ್ನು ಕಡಿತ ಮಾಡಲು ಅಥವಾ ಶೂನ್ಯಕ್ಕಿಳಿಸಲು ಭಾರತ ಮುಂದಾಗಿದೆ’ ಎಂದು ಶ್ವೇತಭವನ ಸೋಮವಾರ ಬಿಡುಗಡೆ ಮಾಡಿರುವ ಫ್ಯಾಕ್ಟ್ ಶೀಟ್ ವರದಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.