ಬೆಂಗಳೂರು: ದೇಶದಲ್ಲೇ ಕರ್ನಾಟಕ ಅತಿ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ತಲಾ ಆದಾಯ ಪ್ರಮಾಣ ₹2 ಲಕ್ಷ (₹2,04,605 )ದಾಟಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವರದಿಯೊಂದನ್ನು ಉಲ್ಲೇಖಿಸಿ ಪೋಸ್ಟ್ ಮಾಡಿರುವ ಅವರು, ಈ ಗಮನಾರ್ಹ ಸಾಧನೆಗೆ ಕಾಂಗ್ರೆಸ್ ಸರ್ಕಾರದ ದೂರದೃಷ್ಟಿಯ ಆರ್ಥಿಕ ನೀತಿಗಳು ಮತ್ತು ಸಾಮಾನ್ಯ ನಾಗರಿಕರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಗ್ಯಾರಂಟಿ ಯೋಜನೆಗಳು ನೇರ ಪರಿಣಾಮ ಬೀರಿವೆ ಎಂದಿದ್ದಾರೆ.
ಗ್ಯಾರಂಟಿ ಯೋಜನೆಗಳು ರಾಜ್ಯವನ್ನು ದಿವಾಳಿ ಮಾಡುತ್ತವೆ ಎಂದು ಬಿಜೆಪಿ ನಾಯಕರು ಸುಳ್ಳು ಪ್ರಚಾರ ಮಾಡುತ್ತಿದ್ದರು. ಆದರೆ ಈಗ ಕೇಂದ್ರ ಹಣಕಾಸು ಸಚಿವಾಲಯದ ದತ್ತಾಂಶಗಳು ಅವರ ಪ್ರತಿಪಾದನೆಯ ಪೊಳ್ಳುತನವನ್ನು ಬಹಿರಂಗಪಡಿಸಿವೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.