ADVERTISEMENT

ರಾಜ್ಯದಾದ್ಯಂತ ಮುಂದುವರಿದ ಸಾರಿಗೆ ನೌಕರರ ಮುಷ್ಕರ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 5:24 IST
Last Updated 13 ಡಿಸೆಂಬರ್ 2020, 5:24 IST
ಸಾರಿಗೆ ನೌಕರರ ಮುಷ್ಕರ
ಸಾರಿಗೆ ನೌಕರರ ಮುಷ್ಕರ   

ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಮುಷ್ಕರ ಭಾನುವಾರವೂ ರಾಜ್ಯದಾದ್ಯಂತ ಮುಂದುವರಿದಿದೆ. ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ಬಹುತೇಕ ಬಸ್ ಗಳು ರಸ್ತೆಗೆ ಇಳಿದಿಲ್ಲ.

ತಮ್ಮನ್ನೂ ಸರ್ಕಾರಿ ನೌಕರೆರೆಂದು ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಗುರುವಾರದಿಂದ ಮುಷ್ಕರ ನಡೆಸುತ್ತಿದ್ದಾರೆ. ನೌಕರರ ಪ್ರತಿಭಟನೆ ಅಂತ್ಯಗೊಳಿಸಲು ರಾಜ್ಯ ಸರ್ಕಾರ ನಡೆಸಿದ ಪ್ರಯತ್ನಗಳು ಫಲ ನೀಡಿಲ್ಲ.

ಸಾರಿಗೆ ಸಚಿವರೂ ಆಗಿರುವ ಉಪ‌ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ನೌಕರರ ಮನವೊಲಿಕೆಗಾಗಿ ಸಾರಿಗೆ ನೌಕರರ ಸಂಘಟನೆಗಳ ಪ್ರತಿನಿಧಿಗಳ ಸಭೆ ಕರೆದಿದ್ದಾರೆ.‌ ವಿಕಾಸಸೌಧದಲ್ಲಿ ಭಾನುವಾರ ಬೆಳಿಗ್ಗೆ ಸಭೆ ನಿಗದಿಯಾಗಿದೆ.

ಆದರೆ, ತಮಗೆ ಈವರೆಗೂ ಅಧಿಕೃತ ಆಹ್ವಾನ ಬಂದಿಲ್ಲ ಎಂದು ಮುಷ್ಕರದ ನೇತೃತ್ವ‌ ವಹಿಸಿರುವ ಸಾರಿಗೆ ನೌಕರರ ಕೂಟದ ಮುಖಂಡರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.