ADVERTISEMENT

ಧಾರವಾಡದ ಕುಂದಗೋಳದಲ್ಲಿ ಅಮಿತ್ ಶಾ ರೋಡ್ ಶೋ: ಬೊಮ್ಮಾಯಿ, ಬಿಎಸ್‌ವೈ ಸಾಥ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜನವರಿ 2023, 12:40 IST
Last Updated 28 ಜನವರಿ 2023, 12:40 IST
ಕುಂದಗೋಳದಲ್ಲಿ ಅಮಿತ್ ಶಾ ರೋಡ್ ಶೋ
ಕುಂದಗೋಳದಲ್ಲಿ ಅಮಿತ್ ಶಾ ರೋಡ್ ಶೋ   

ಬೆಂಗಳೂರು: ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರೋಡ್ ಶೋ ನಡೆಸುತ್ತಿದ್ದಾರೆ.

ಬಿಜೆಪಿ 'ವಿಜಯ ಸಂಕಲ್ಪ ಅಭಿಯಾನ'ದ ಅಂಗವಾಗಿ ರೋಡ್ ಶೋ ಹಮ್ಮಿಕೊಳ್ಳಲಾಗಿದೆ. ರೋಡ್ ಶೋ ನಡೆಸುತ್ತಿರುವ ಮಾರ್ಗದಲ್ಲಿ ಪೊಲೀಸರ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ರೋಡ್ ಶೋಗೆ ಜನಸಾಗರವೇ ಹರಿದು ಬಂದಿದ್ದು, ಪ್ರವಾಸಿ ಮಂದಿರದಿಂದ ಗಾಳಿ ಮರೆಮ್ಮ ದೇವಸ್ಥಾನದವರೆಗೆ ರೋಡ್ ಶೋ ನಡೆಯಲಿದೆ.

ADVERTISEMENT

ಅಮಿತ್‌ ಶಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಪ್ರಲ್ಹಾದ ಜೋಶಿ ಸಾಥ್ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.