ADVERTISEMENT

ಕೆಯುಡಬ್ಲ್ಯೂಜೆ: ಪ್ರತಿಭಾ ಪುರಸ್ಕಾರಕ್ಕೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 18 ಜೂನ್ 2022, 18:30 IST
Last Updated 18 ಜೂನ್ 2022, 18:30 IST
   

ಬೆಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿ ಗಳಿಗೆ ತಾಲ್ಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆ ಯಲಿದೆ ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ರಾಜ್ಯ ಮಟ್ಟದಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ‌ ಪಡೆದ ಪತ್ರಕರ್ತರ ಸಂಘದ ಸದ ಸ್ಯರ ಮಕ್ಕಳನ್ನು ಪುರಸ್ಕರಿಸ ಲಾಗುತ್ತದೆ. ಈ ಸಂಬಂಧ ಅಂಕಪಟ್ಟಿಯ ಪ್ರತಿಯನ್ನು ಜೂನ್ ಅಂತ್ಯದೊಳಗೆ ಅಧ್ಯಕ್ಷರು/ಪ್ರಧಾನ ಕಾರ್ಯ ದರ್ಶಿ,ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಕೆ.ಜಿ.ರಸ್ತೆ, ಬೆಂಗಳೂರು-09 ಈ ವಿಳಾಸಕ್ಕೆ ಕಳುಹಿಸಬೇಕು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.