ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಸಾಂಸ್ಕೃತಿಕ ನಾಯಕರ ಹೆಸರಿಡಲು ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಈ ಕುರಿತು ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಿರುವ ಅವರು, ‘ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ, ಶೂದ್ರ ಸಿದ್ದಾಂತದ ಹರಿಕಾರ ಕನಕದಾಸ, ಹಿಂದುಳಿದ ಸಮುದಾಯಗಳಿಗೆ ಚೈತನ್ಯ ನೀಡಿ ರಾಜ್ಯದ ಅಭಿವೃದ್ಧಿಗೆ ಚಲನಶೀಲತೆ ತಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದೇವರಾಜ ಅರಸು ಅವರ ಹೆಸರುಗಳನ್ನು ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡುವ ಕುರಿತು ಪ್ರಸ್ತಾವನೆ ಸಲ್ಲಿಸಿ’ ಎಂದು ನಿರ್ದೇಶನ ನೀಡಿದ್ದಾರೆ.
ಈ ಕುರಿತು ಪರಿಶೀಲಿಸಿ, ಸೂಕ್ತ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟದ ಮುಂದೆ ತರುವಂತೆಯೂ ಅವರು ಸೂಚಿಸಿದ್ದಾರೆ.
ಆದಿಕವಿ ಮಹರ್ಷಿ ವಾಲ್ಮೀಕಿ, ಅಕ್ಕಮಹಾದೇವಿ, ರಾಣಿ ಚನ್ನಮ್ಮ, ಕೃಷ್ಣದೇವರಾಯ, ಕುವೆಂಪು, ವಿಶ್ವೇಶ್ವರಯ್ಯ, ಗಂಗೂಬಾಯಿ ಹಾನಗಲ್, ರಾಜೀವ್‌ಗಾಂಧಿ ಹಾಗೂ ಮನ ಮೋಹನ ಸಿಂಗ್ ಅವರ ಹೆಸರನ್ನು ಈಗಾಗಲೇ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡಲಾಗಿದೆ ಎಂದೂ ಅವರು ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.