ADVERTISEMENT

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2023, 14:36 IST
Last Updated 18 ಡಿಸೆಂಬರ್ 2023, 14:36 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   ಪ್ರಾತಿನಿಧಿಕ ಚಿತ್ರ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಕೆಲವು ಭಾಗಗಳಲ್ಲಿ  ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರಲಿದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.