ADVERTISEMENT

ಅ.3ರಿಂದ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2022, 14:45 IST
Last Updated 2 ಅಕ್ಟೋಬರ್ 2022, 14:45 IST
   

ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಸೋಮವಾರ ಹಾಗೂ ಮಂಗಳವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದೆರಡು ಸಲ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.