ADVERTISEMENT

ರಾಜ್ಯದ 5 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಣೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 19:15 IST
Last Updated 27 ನವೆಂಬರ್ 2021, 19:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಶ್ರೀಲಂಕಾ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣ ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನ.28ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

‘ನ. 29ರ ವೇಳೆಗೆ ಬಂಗಾಳ ಕೊಲ್ಲಿ ಯಲ್ಲಿ ವಾಯುಭಾರ ಕುಸಿತವಾಗುವ ಲಕ್ಷಣಗಳು ಕಂಡುಬಂದಿವೆ. ಆ ವೇಳೆ ರಾಜ್ಯದಲ್ಲೂ ಮಳೆಯಾಗಬಹುದು. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ’ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದರು.

ADVERTISEMENT

ರಾಜ್ಯದಲ್ಲಿ ಎರಡು ದಿನಗಳಿಂದ ಮಳೆ ತಗ್ಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಬೆಳಗಾವಿ ಹಾಗೂ ಧಾರವಾಡದಲ್ಲಿ ಶನಿವಾರ ತಲಾ 14 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.