ADVERTISEMENT

ಬಿಸಿಲ ಧಗೆ; ಕಾಡ್ಗಿಚ್ಚು ಸಾಧ್ಯತೆ: ಕೆಎಸ್‌ಎನ್‌ಡಿಎಂಸಿ ಮುನ್ನೆಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2025, 15:26 IST
Last Updated 6 ಮಾರ್ಚ್ 2025, 15:26 IST
<div class="paragraphs"><p> ಕಾಡ್ಗಿಚ್ಚು</p></div>

ಕಾಡ್ಗಿಚ್ಚು

   

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲ ಧಗೆಯಿಂದಾಗಿ ಮುಂದಿನ ಒಂದು ವಾರದ ಅವಧಿಯಲ್ಲಿ ಕೆಲವೆಡೆ ಕಾಡ್ಗಿಚ್ಚು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್‌ಎನ್‌ಡಿಎಂಸಿ) ಮುನ್ನೆಚ್ಚರಿಕೆ ನೀಡಿದೆ. 

ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಒಂದೆರಡು ಕಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮುಂದಿನ ಮೂರು ದಿನಗಳು ಕರಾವಳಿಯಲ್ಲಿ ಕೆಲವೆಡೆ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಂಭವವಿದೆ. ಉತ್ತರ ಒಳನಾಡಿನಲ್ಲಿ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. 

ADVERTISEMENT

ಗುರುವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ರಾಯಚೂರು ಹಾಗೂ ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ (38.2 ಡಿಗ್ರಿ ಸೆಲ್ಸಿಯಸ್) ವರದಿಯಾಗಿದೆ. ಹಾವೇರಿ, ಕಲಬುರಗಿ ವಿಜಯಪುರ, ವಿಜಯನಗರ, ಬಾಗಲಕೋಟೆ ಹಾಗೂ ಧಾರವಾಡದಲ್ಲಿ ಗರಿಷ್ಠ ಉಷ್ಣಾ 37 ಡಿಗ್ರಿ ಸೆಲ್ಸಿಯಸ್ ದಾಟಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.