ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನ ತೀವ್ರ ಚಳಿ ಮುಂದುವರಿಯಲಿದ್ದು, ಮಳೆ ಬೀಳುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಗುರುವಾರ ತಿಳಿಸಿದೆ.
ಮುಂದಿನ ದಿನಗಳಲ್ಲಿ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಜನವರಿ 9 ರಿಂದ 12 ರವರೆಗೆ ಮಳೆಯ ಮುನ್ಸೂಚನೆ ಇದೆ ಎಂದು ತಿಳಿಸಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆಯಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಬೀದರ್‌ನಲ್ಲಿ ಗುರುವಾರ ಬೆಳಿಗ್ಗೆ ತಾಪಮಾನ 6.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ವಿಜಯಪುರದಲ್ಲಿ 7.8 ಹಾಗೂ ತುಮಕೂರಿನಲ್ಲಿ 7.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ 9 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡುಬಂದಿದೆ.
ಮಳೆಯ ಮುನ್ಸೂಚನೆಯೂ ಇರುವ ಕಾರಣ, ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಗಾಳಿಯ ತೀವ್ರತೆ ಹೆಚ್ಚಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.