ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಾಜ್ಯದ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಳಿದ ಕಡೆಗಳಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದಲ್ಲಿಯೇ ಕಲಬುರಗಿ ಜಿಲ್ಲೆಯಲ್ಲಿ ಭಾನುವಾರ ಗರಿಷ್ಠ ಉಷ್ಣಾಂಶ 39.3 ಡಿಗ್ಸಿ ಸೆಲ್ಸಿಯಸ್ ದಾಖಲಾಗಿತ್ತು. ಮಂಡ್ಯದಲ್ಲಿ ಅತಿ ಕನಿಷ್ಠ ಉಷ್ಣಾಂಶ 19.6 ಡಿಗ್ರಿ ಸೆಲ್ಸಿಯಸ್ ತಾಪಮಾನ ಇತ್ತು.
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ 2 ಸೆಂ.ಮೀ ಹಾಗೂ ಬೆಳಗಾವಿ ಜಿಲ್ಲೆಯ ಲೋಂಡಾದಲ್ಲಿ 1 ಸೆಂ.ಮೀ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.