ADVERTISEMENT

ಮುಂದಿನ ವರ್ಷ ಕೆಲ ಶಾಲೆಗಳಲ್ಲಿ ಎನ್‌ಇಪಿ ಜಾರಿ: ಸಚಿವ ಬಿ.ಸಿ.ನಾಗೇಶ್‌

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2021, 21:43 IST
Last Updated 16 ಡಿಸೆಂಬರ್ 2021, 21:43 IST
ಸಚಿವ ಬಿ.ಸಿ.ನಾಗೇಶ್‌
ಸಚಿವ ಬಿ.ಸಿ.ನಾಗೇಶ್‌   

ಬೆಳಗಾವಿ (ಸುವರ್ಣ ವಿಧಾನಸೌಧ): ಶಿಕ್ಷಕರಿಗೆ ಹಾಗೂ ಅಂಗನವಾಡಿ ನೌಕರರಿಗೆ ತರಬೇತಿ ನೀಡಿ ಮುಂದಿನ ವರ್ಷ ಆಯ್ದ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಜಾರಿ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದರು.

ವಿಧಾನಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಮಹಾಂತೇಶ ಕೌಜಲಗಿ ಪ್ರಶ್ನೆಗೆ ಉತ್ತರಿಸಿ, ’ಈ ನೀತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದ್ದು, ಅನುಷ್ಠಾನ ಕಾರ್ಯಪಡೆಯ ಶಿಫಾರಸಿನಂತೆ ಹಂತ ಹಂತವಾಗಿ ಸಂಪೂರ್ಣವಾಗಿ ಜಾರಿಗೊಳಿಸಲಾಗುವುದು‘ ಎಂದರು.

’ಆರಂಭಿಕ ಹಂತದಲ್ಲಿ ಪೂರ್ವ ಪ್ರಾಥಮಿಕ ಹಂತದಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಅಂಗನವಾಡಿ ನೌಕರರಿಗೆ ತರಬೇತಿ ನೀಡಲಾಗುತ್ತದೆ. ರಾಜ್ಯದಲ್ಲಿನ ಪ್ರಸ್ತುತ ಸ್ಥಿತಿ ಅವಲೋಕಿಸಲು ರಾಜ್ಯ ಶಿಕ್ಷಣ ಕ್ಷೇತ್ರದ ಸ್ಥಿತಿಗತಿ ವರದಿ ಸಿದ್ಧಪಡಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಈ ವರದಿ ಸಿದ್ಧಗೊಂಡ ಬಳಿಕ ಪಠ್ಯಕ್ರಮ ಹಾಗೂ ಪಠ್ಯಸೂಚಿ ರಚಿಸಲಾಗುವುದು‘ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.