ADVERTISEMENT

ಅತ್ಯಾಚಾರ: ವಿವಾದಕ್ಕೆ ಕಾರಣವಾಯ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾತು

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2021, 2:22 IST
Last Updated 17 ಡಿಸೆಂಬರ್ 2021, 2:22 IST
 ಕೆ.ಆರ್‌.ರಮೇಶ್‌ ಕುಮಾರ್ -ಪಿಟಿಐ ಚಿತ್ರ
ಕೆ.ಆರ್‌.ರಮೇಶ್‌ ಕುಮಾರ್ -ಪಿಟಿಐ ಚಿತ್ರ   

ಬೆಳಗಾವಿ (ಸುವರ್ಣ ವಿಧಾನಸೌಧ): ಅತ್ಯಾಚಾರದ ಕುರಿತು ಕಾಂಗ್ರೆಸ್‌ ಶಾಸಕ ಕೆ.ಆರ್‌.ರಮೇಶ್‌ ಕುಮಾರ್ ಅವರು ಗುರುವಾರ ವಿಧಾನಸಭೆಯಲ್ಲಿ ನೀಡಿದ ಹೇಳಿಕೆ ಟೀಕೆಗೆ ಗುರಿಯಾಗಿದೆ.

ರಮೇಶ್ ಕುಮಾರ್‌ ಹೇಳಿದ್ದು ಇಷ್ಟು– ‘ದೆರ್‌ ಈಸ್‌ ಎ ಸೇಯಿಂಗ್‌, ವೆನ್‌ ರೇಪ್‌ ಈಸ್‌ ಇನೆವಿಟೆಬಲ್‌ ಲೆಟ್‌ ಲೇಡೌನ್‌ ಅಂಡ್‌ ಎಂಜಾಯ್‌ (ಅಂದರೆ, ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ) ಎಂದು ಹೇಳಿದರು.

ಅತಿವೃಷ್ಟಿಯ ಕುರಿತು ಚರ್ಚೆ ನಡೆಯುವ ಸಂದರ್ಭದಲ್ಲಿ ಎಲ್ಲಾ ಸದಸ್ಯರು ಮಾತನಾಡಬೇಕು ಎಂದು ಸಭಾಧ್ಯಕ್ಷರ ದುಂಬಾಲು ಬಿದ್ದರು. ವಿರೋಧಪಕ್ಷ ಮತ್ತು ಆಡಳಿತ ಪಕ್ಷದವರು ಮಾತನಾಡುವ ಸದಸ್ಯರ ಸಂಖ್ಯೆಯನ್ನು ಮಿತಿಗೊಳಿಸದೇ ಸುಮ್ಮನಾದರು.

ADVERTISEMENT

ಆಗ ಸಭ್ಯಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ನಾಲ್ಕು ದಿನಗಳಿಂದ ಚರ್ಚೆ ನಡೆಯುತ್ತಿದೆ. ಸರ್ಕಾರ ಉತ್ತರ ಕೊಡಬೇಕು. ಈ ರೀತಿ ಆದರೆ ಯಾವುದೇ ಕಾರ್ಯಕಲಾಪ ನಡೆಸಲು ಆಗುವುದಿಲ್ಲ. ಈಗಾಗಲೇ 25 ಶಾಸಕರು ಮಾತನಾಡಿದ್ದಾರೆ’ ಎಂದರು.

ಆಗಲೂ ಶಾಸಕರು ಮಾತನಾಡುವುದಕ್ಕಾಗಿ ಕೈ ಎತ್ತುವುದನ್ನು ಮುಂದುವರಿಸಿದರು. ಇದರಿಂದ ಬೇಸತ್ತ ಸಭಾಧ್ಯಕ್ಷರು, ಎಷ್ಟು ಶಾಸಕರು ಬೇಕಾದರೂ ಮಾತನಾಡಲಿ, ನಾನು ಕೇಳುತ್ತಾ ಆನಂದಿಸುವುದನ್ನು ಬಿಟ್ಟರೆ ಇನ್ನೇನು ಮಾಡಲಿ. ಅಜೆಂಡಾದಲ್ಲಿರುವ ಬೇರೆ ಯಾವುದೇ ವಿಷಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುವುದಿಲ್ಲ.’ ಎಂದರು.

ಅದೊಂದು ಮಾತಿದೆಯಲ್ಲ ರಮೇಶ್‌ ಕುಮಾರ್ ಅವರೇ ಎಂದು ಕಾಗೇರಿ ಹೇಳಿದರು. ಆಗ ಸಾಂದರ್ಭಿಕವಾಗಿ ರಮೇಶ್‌ಕುಮಾರ್‌ ಮೇಲಿನಂತೆ ಮಾತು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.