ADVERTISEMENT

ಕರ್ನಾಟಕದ 69.51 ಲಕ್ಷ ಹೆಕ್ಟೇರ್‌ನ ಫಲವತ್ತತೆ ನಾಶ: ಕೇಂದ್ರ ಸರ್ಕಾರ

​ಪ್ರಜಾವಾಣಿ ವಾರ್ತೆ
Published 28 ಜುಲೈ 2023, 16:23 IST
Last Updated 28 ಜುಲೈ 2023, 16:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕರ್ನಾಟಕದ 69.51 ಲಕ್ಷ ಹೆಕ್ಟೇರ್‌ ಪ್ರದೇಶದ ಫಲವತ್ತತೆ ನಾಶವಾಗಿದೆ ಎಂದು ಕೇಂದ್ರ ಸರ್ಕಾರವು ರಾಜ್ಯಸಭೆಗೆ ತಿಳಿಸಿದೆ. 

ಬಿಜೆಪಿಯ ಸದಸ್ಯ ನಾರಾಯಣ ಕೊರಗಪ್ಪ ಕೇಳಿರುವ ಪ್ರಶ್ನೆಗೆ ಕೇಂದ್ರ ಪರಿಸರ, ಅರಣ್ಯ ಹಾಗೂ ತಾಪಮಾನ ಬದಲಾವಣೆಯ ಸಚಿವಾಲಯದ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಉತ್ತರ ನೀಡಿದ್ದಾರೆ. 

ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೊ) 2016ರ ಮರುಭೂಮೀಕರಣ ಹಾಗೂ ಭೂ ಸವಕಳಿ ಅಟ್ಲಾಸ್‌ ಆಫ್‌ ಇಂಡಿಯಾ ಪ್ರಕಾರ, 2011-13ರ ಅವಧಿಯಲ್ಲಿ ರಾಜ್ಯದಲ್ಲಿ ವ್ಯಾಪಕ ಪ್ರಮಾಣದಲ್ಲಿ ಭೂಸವಕಳಿ ಆಗಿದೆ. ನೀರಿನ ಸವೆತ ಹಾಗೂ ಸಸ್ಯವರ್ಗದ ಸವೆತದಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಫಲವತ್ತತೆ ನಾಶ ಆಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಭೂ ಸವಕಳಿ ಆಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಈ ಪ್ರಮಾಣ ಕಡಿಮೆ ಇದೆ ಎಂದು ಅವರು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.