ADVERTISEMENT

KAS Main Exam Date Announced: ಮೇ 3, 7, 5 ಮತ್ತು 9ರಂದು ಪರೀಕ್ಷೆ‌

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2025, 13:33 IST
Last Updated 27 ಮಾರ್ಚ್ 2025, 13:33 IST
ಕೆಪಿಎಸ್‌ಸಿ
ಕೆಪಿಎಸ್‌ಸಿ    

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಮೇ 3, 7, 5 ಮತ್ತು 9ರಂದು ಮುಖ್ಯ ಪರೀಕ್ಷೆ‌ ನಡೆಸಲು ಕೆಪಿಎಸ್‌ಸಿ ನಿರ್ಧರಿಸಿದೆ.

ಡಿ. 29ರಂದು ನಡೆದ ಪೂರ್ವಭಾವಿ ಮರು ಪರೀಕ್ಷೆಯಲ್ಲಿ 1:15ರ ಅನುಪಾತದಲ್ಲಿ ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ನೋಂದಣಿ ಸಂಖ್ಯೆಯನ್ನು ಕೆಪಿಎಸ್‌ಸಿ ಈಗಾಗಲೇ ಬಿಡುಗಡೆ ಮಾಡಿದೆ.

ಮುಖ್ಯಪರೀಕ್ಷೆಯನ್ನು ಇದೇ 28, 29 ಮತ್ತು ಏಪ್ರಿಲ್ 1, 2ರಂದು ನಡೆಸಲು ಕೆಪಿಎಸ್‌ಸಿ ನಿರ್ಧರಿಸಿತ್ತು. ಪ್ರಶ್ನೆಪತ್ರಿಕೆಯಲ್ಲಿ ಭಾಷಾಂತರ ಲೋಪಗಳು ಕಂಡುಬಂದ ಕಾರಣ ಮತ್ತೊಮ್ಮೆ ಪೂರ್ವಭಾವಿ ಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿ ಕೆಲವು ಅಭ್ಯರ್ಥಿಗಳು ಕೆಎಟಿ ಮೆಟ್ಟಿಲೇರಿದ್ದರು. ಹೀಗಾಗಿ, ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪ್ರಕರಣವನ್ನು ಕೆಎಟಿ ವಿಲೇವಾರಿ ಮಾಡಿದ ಕಾರಣ ಹೊಸ ದಿನಾಂಕವನ್ನು ಕೆಪಿಎಸ್‌ಸಿ ನಿಗದಿಪಡಿಸಿದೆ.

ADVERTISEMENT

ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ (http://kpsc.kar.nic.in) ಪ್ರಕಟಿಸಲಾಗಿದೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ರಮಣದೀಪ್‌ ಚೌಧರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.