ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಕೊಡಮಾಡುವ ‘ಲಕ್ಷ್ಮೀದೇವಿ ಮತ್ತು ಆರ್. ರಾಮಚಂದ್ರ ಬಾಯರ್ ದತ್ತಿ ಪ್ರಶಸ್ತಿ’ಗೆ ಹೋಟೆಲ್ ಉದ್ಯಮಿ ಎನ್. ಗಿರಿಶೇಖರ ಕಲ್ಕೂರ ಆಯ್ಕೆಯಾಗಿದ್ದಾರೆ.
ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದ ಸಮಿತಿ ಈ ಆಯ್ಕೆ ನಡೆಸಿದೆ. ಗಿರಿಶೇಖರ ಕಲ್ಕೂರ ಚನ್ನಪಟ್ಟಣದಲ್ಲಿ ಶಿವಳ್ಳಿ ರೆಸ್ಟೋರೆಂಟ್ ನಡೆಸುತ್ತಿದ್ದಾರೆ. ಹಿರಿಯ ಹೋಟೆಲ್ ಉದ್ಯಮಿಯೊಬ್ಬರಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಶಸ್ತಿ ₹ 5 ಸಾವಿರ ನಗದು, ಫಲಕ ಒಳಗೊಂಡಿದೆ. ನ.13 ಸಂಜೆ 4 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.