ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಪಟ್ಟಣದಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಬೆಂಗಳೂರಿನ ಮತ್ತೊಬ್ಬ ಸಾಫ್ಟ್‌ವೇರ್ ಎಂಜಿನಿಯರ್ ಮೃತಪಟ್ಟಿದ್ದಾರೆ.
ರಾಮಮೂರ್ತಿ ನಗರದ ಮಧುಸೂದನ್ ಮೃತಪಟ್ಟವರು. ಮೂಲತಃ ಆಂಧ್ರಪ್ರದೇಶದವರಾದ ಮಧುಸೂದನ್ ಅವರು ರಾಮಮೂರ್ತಿ ನಗರದಲ್ಲಿ ಸ್ವಂತ ಮನೆ ನಿರ್ಮಿಸಿಕೊಂಡು ಕುಟುಂಬಸ್ಥರ ಜತೆಗೆ ನೆಲಸಿದ್ದರು.
ಪತ್ನಿ, ಮಕ್ಕಳು ಹಾಗೂ ಸ್ನೇಹಿತರೊಂದಿಗೆ ಭಾನುವಾರ ಕಾಶ್ಮೀರದ ಪ್ರವಾಸಿ ತಾಣಗಳಿಗೆ ತೆರಳಿದ್ದರು. ಮಂಗಳವಾರ ಬೆಳಿಗ್ಗೆ ಪಹಲ್ಗಾಮ್ ಪಟ್ಟಣವನ್ನು ತಲುಪಿದ್ದರು. ಪತ್ನಿ, ಮಕ್ಕಳು ಹಾಗೂ ಸ್ನೇಹಿತರು ತಿಂಡಿ ತರಲು ತೆರಳಿದ್ದರು. ಮಧುಸೂದನ್ ರಾವ್ ಅವರು ಹುಲ್ಲಿನ ಮೇಲೆ ಕುಳಿತಿದ್ದರು. ಆ ಸಂದರ್ಭದಲ್ಲಿ ನಡೆದ ಉಗ್ರರ ದಾಳಿಗೆ ಮಧುಸೂದನ್ ಅವರು ಬಲಿಯಾಗಿದ್ದಾರೆ ಎಂದು ಗೊತ್ತಾಗಿದೆ.
ರಾಜ್ಯದಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದವರ ಪೈಕಿ ಮೂವರು ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.