ADVERTISEMENT

‘ವಿದ್ಯುತ್ ದರ ಹೆಚ್ಚಳ ಬೇಡ’-ಕಾಸಿಯಾ ಮನವಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 23:14 IST
Last Updated 13 ನವೆಂಬರ್ 2020, 23:14 IST
ಬಿ.ಎಸ್.ಯಡಿಯೂರಪ್ಪ ಅವರಿಗೆ ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ ಮನವಿ ಸಲ್ಲಿಸಿದರು. ಪದಾಧಿಕಾರಿಗಳಾದ ಎನ್.ಆರ್.ಜಗದೀಶ್, ಪಿ.ಎನ್.ಜೈಕುಮಾರ್ ಇದ್ದರು
ಬಿ.ಎಸ್.ಯಡಿಯೂರಪ್ಪ ಅವರಿಗೆ ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ ಮನವಿ ಸಲ್ಲಿಸಿದರು. ಪದಾಧಿಕಾರಿಗಳಾದ ಎನ್.ಆರ್.ಜಗದೀಶ್, ಪಿ.ಎನ್.ಜೈಕುಮಾರ್ ಇದ್ದರು   

ಬೆಂಗಳೂರು: ವಿದ್ಯುತ್ ದರ ಹೆಚ್ಚಳ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳುವಂತೆಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಮನವಿ ಮಾಡಿದೆ.

ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಭೇಟಿಯಾಗಿ ಮನವಿ ಸಲ್ಲಿಸಿತು.

‘ವಿದ್ಯುತ್ ದರವನ್ನು ಪ್ರತಿ ಯೂನಿಟ್‍ಗೆ 20 ಪೈಸೆಯಿಂದ 40 ಪೈಸೆಗೆ ಹೆಚ್ಚಿಸಲು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (ಕೆಇಆರ್‌ಸಿ) ಅನುಮತಿ ನೀಡಿರುವುದರಿಂದಸಣ್ಣ ಮತ್ತು ಮಧ್ಯಮ (ಎಂಎಸ್‌ಎಂಇ) ಕೈಗಾರಿಕೆಗಳು ‌ ಆಘಾತಕ್ಕೊಳಗಾಗಿವೆ. ಕೊರೊನಾದಿಂದ ನಲುಗಿ, ಈಗ ತಾನೇ ಚೇತರಿಸಿಕೊಳ್ಳುತ್ತಿರುವ ಕೈಗಾರಿಕೆಗಳಿಗೆ ಈ ನಿರ್ಧಾರ ಮಾರಕವಾಗಲಿದೆ' ಎಂದು ಕೆ.ಬಿ.ಅರಸಪ್ಪ ಕಳವಳ ವ್ಯಕ್ತಪಡಿಸಿದರು.

ADVERTISEMENT

‘ವಸತಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಕೈಗಾರಿಕೆಗಳ ಸ್ಥಳಾಂತರ ಕಷ್ಟಸಾಧ್ಯ. ಸದರಿ ಕೈಗಾರಿಕೆಗಳನ್ನು ಸ್ಥಳಾಂತರಿಸಲು ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತ ಹೊಸ ಕೈಗಾರಿಕಾ ವಸಾಹತು ಸ್ಥಾಪಿಸುವ ಕುರಿತು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು' ಎಂದರು.

‘ಕೈಗಾರಿಕಾ ನೀತಿ ಜಾರಿಗೆ ಬಂದು ಎರಡು ತಿಂಗಳು ಕಳೆದಿದ್ದರೂ, ಸಂಬಂಧಪಟ್ಟ ಇಲಾಖೆಗಳು ಅಧಿಸೂಚನೆ ಹೊರಡಿ
ಸಿಲ್ಲ. ಇದರಿಂದ ಕೈಗಾರಿಕಾ ನೀತಿಯಲ್ಲಿ ಜಾರಿಗೊಳಿಸಲಾದ ರಿಯಾಯಿತಿ ಮತ್ತು ಪ್ರಯೋಜನಗಳನ್ನು ಕೈಗಾರಿಕೋದ್ಯಮಿ
ಗಳು ಪಡೆಯಲು ಸಾಧ್ಯವಾಗುತ್ತಿಲ್ಲ. ಕಂದಾಯ, ವಿದ್ಯುತ್ ಮತ್ತು ಇತರೆ ಇಲಾಖೆಗಳು ತ್ವರಿತವಾಗಿ ಅಧಿಸೂಚನೆಗಳನ್ನು ಹೊರಡಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.