ADVERTISEMENT

ಸುಗಮ ಸಂಗೀತ ಪರಿಷತ್ತಿನ ಪ್ರಶಸ್ತಿ ಪ್ರಕಟ: ಬಿ.ಆರ್. ಲಕ್ಷ್ಮಣರಾವ್‌ಗೆ ಕಾವ್ಯ ಶ್ರೀ

​ಪ್ರಜಾವಾಣಿ ವಾರ್ತೆ
Published 16 ಜುಲೈ 2025, 14:18 IST
Last Updated 16 ಜುಲೈ 2025, 14:18 IST
ಬಿ.ಆರ್. ಲಕ್ಷ್ಮಣರಾವ್
ಬಿ.ಆರ್. ಲಕ್ಷ್ಮಣರಾವ್   

ಬೆಂಗಳೂರು: ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ 2023 ಹಾಗೂ 2024ನೇ ಸಾಲಿನ ‘ಕಾವ್ಯ ಶ್ರೀ’ ಮತ್ತು ‘ಭಾವ ಶ್ರೀ’ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ‍ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ, ‘2023ನೇ ಸಾಲಿನ ‘ಕಾವ್ಯ ಶ್ರೀ’ ಪ್ರಶಸ್ತಿಗೆ ಕವಿ ಬಿ.ಆರ್. ಲಕ್ಷ್ಮಣರಾವ್ ಮತ್ತು ‘ಭಾವ ಶ್ರೀ’ ಪ್ರಶಸ್ತಿಗೆ ಗಾಯಕಿ ರತ್ನಮಾಲಾ ಪ್ರಕಾಶ್ ಆಯ್ಕೆಯಾಗಿದ್ದಾರೆ. 2024ನೇ ಸಾಲಿನ ‘ಕಾವ್ಯ ಶ್ರೀ’ ಪ್ರಶಸ್ತಿಗೆ ಸಾಹಿತಿ ನಾ. ದಾಮೋದರ ಶೆಟ್ಟಿ ಮತ್ತು ‘ಭಾವ ಶ್ರೀ’ ಪ್ರಶಸ್ತಿಗೆ ಗಾಯಕಿ ಕೆ.ಎಸ್‌. ಸುರೇಖಾ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ತಲಾ ₹10 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಒಳಗೊಂಡಿದೆ’ ಎಂದು ಮಾಹಿತಿ ನೀಡಿದರು.  

‍ಆಗಸ್ಟ್‌ 2 ಮತ್ತು 3ರಂದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ 19ನೇ ಸುಗಮ ಸಂಗೀತ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.