ADVERTISEMENT

ಸಿಇಟಿ: ಅರ್ಜಿ ಸಲ್ಲಿಸಲು ಫೆ.27 ಕೊನೆ ದಿನ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 16:25 IST
Last Updated 21 ಫೆಬ್ರುವರಿ 2026, 16:25 IST
<div class="paragraphs"><p>ಕರ್ನಾಟಕ ಪರೀಕ್ಷಾ ಪ್ರಾಧಿಕಾರ</p></div>

ಕರ್ನಾಟಕ ಪರೀಕ್ಷಾ ಪ್ರಾಧಿಕಾರ

   

ಬೆಂಗಳೂರು: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆ.27ರವರೆಗೆ ವಿಸ್ತರಿಸಲಾಗಿದೆ.

ಇದು ಕೊನೆಯ ಅವಕಾಶವಾಗಿದ್ದು, ಈ ಅವಧಿ ನಂತರ ವಿಸ್ತರಣೆ ಇರುವುದಿಲ್ಲ. ಅಭ್ಯರ್ಥಿಗಳು ನಿಗದಿತ ಅವಧಿಯ ಒಳಗೆ ಆನ್‌ ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್‌ ಗದ್ಯಾಳ ಹೇಳಿದ್ದಾರೆ.

ADVERTISEMENT

ಅರ್ಜಿ ಸಲ್ಲಿಸಲು ಫೆ. 27 ಹಾಗೂ ಶುಲ್ಕ ಪಾವತಿಗೆ ಮಾರ್ಚ್‌ 3ರವರೆಗೆ ಅವಕಾಶ ನೀಡಲಾಗಿದೆ. ಇದುವರೆಗೂ 3.18 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. 2.18 ಲಕ್ಷ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಸ್ಯಾಟ್ಸ್‌ ಮೂಲಕ, 1.08 ಲಕ್ಷ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಕಾಲೇಜು ಹಂತದಲ್ಲಿ ಮಾಡಲಾಗಿದೆ ಎಂದು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.