ADVERTISEMENT

ನೀಟ್‌ ಅರ್ಹತೆ: ಕ್ರಮಸಂಖ್ಯೆ ದಾಖಲಿಸಲು ಅವಕಾಶ

​ಪ್ರಜಾವಾಣಿ ವಾರ್ತೆ
Published 5 ಜುಲೈ 2025, 23:16 IST
Last Updated 5 ಜುಲೈ 2025, 23:16 IST
<div class="paragraphs"><p>ಕೆಇಎ</p></div>

ಕೆಇಎ

   

ಬೆಂಗಳೂರು: ಸಿಇಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ನೀಟ್‌ನಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್‌ ಕ್ರಮಸಂಖ್ಯೆಯನ್ನು (ರೋಲ್‌ ನಂಬರ್‌) ದಾಖಲಿಸಲು ಜುಲೈ 8ರ ಬೆಳಿಗ್ಗೆ 11ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ.

ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ನೀಟ್‌ ಕ್ರಮಸಂಖ್ಯೆ ದಾಖಲಿಸಬೇಕು. ಅಭ್ಯರ್ಥಿಗಳು ದಾಖಲಿಸುವ ನಂಬರ್‌ಗಳನ್ನು ಎನ್‌ಟಿಎ ದತ್ತಾಂಶದ ಜತೆ ತಾಳೆ ಮಾಡಿ, ನೀಟ್‌ ಅರ್ಹತೆ ಪಡೆದವರಿಗೆ ಅರ್ಜಿ ನಮೂನೆ ಪ್ರತಿ ತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ನಂತರ ‘ವೆರಿಫಿಕೇಷನ್‌ ಸ್ಲಿಪ್‌’ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ. 

ADVERTISEMENT

ನೀಟ್‌ನಲ್ಲಿ ಅರ್ಹತೆ ಪಡೆದರೂ, ಕೆಇಎಗೆ ಅರ್ಜಿ ಸಲ್ಲಿಸದೇ ಇರುವವರು ಜುಲೈ 7ರಿಂದ 10ರವರೆಗೆ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.