ADVERTISEMENT

KCET Results | ಸಿಇಟಿ: 3ನೇ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 15:49 IST
Last Updated 10 ಸೆಪ್ಟೆಂಬರ್ 2025, 15:49 IST
<div class="paragraphs"><p>ಕರ್ನಾಟಕ ಪರೀಕ್ಷಾ ಪ್ರಾಧಿಕಾರ</p></div>

ಕರ್ನಾಟಕ ಪರೀಕ್ಷಾ ಪ್ರಾಧಿಕಾರ

   

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಎರಡನೇ ಹಾಗೂ ಎಂಜಿನಿಯರಿಂಗ್ ಸೇರಿದಂತೆ ಇತರ ಯುಜಿಸಿಇಟಿ ಕೋರ್ಸ್‌ಗಳ 3ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಪ್ರಕಟಿಸಿದೆ.

ಫಲಿತಾಂಶಕ್ಕೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆ ಇದ್ದರೆ ಸೆ.11 ರಂದು ಬೆಳಿಗ್ಗೆ 11 ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ಸಲ್ಲಿಸಬೇಕು. ಪರಿಶೀಲನೆ ಬಳಿಕ ಗುರುವಾರವೇ ಅಂತಿಮ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ADVERTISEMENT

ಅಂತಿಮ ಫಲಿತಾಂಶ ಪ್ರಕಟಣೆಯ ನಂತರ ಎಂಜಿನಿಯರಿಂಗ್ ಸೇರಿದಂತೆ ಇತರ ಯುಜಿಸಿಇಟಿ ಕೋರ್ಸ್‌ಗಳ ಅಭ್ಯರ್ಥಿಗಳು ಸೆ.13 ರೊಳಗೆ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ.

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶದ ದಿನಾಂಕವನ್ನು ಎಂಸಿಸಿ ಮುಂದೂಡಿರುವ ಕಾರಣ ರಾಜ್ಯದಲ್ಲಿ ಕೂಡ ಈ ಕೋರ್ಸ್‌ಗಳ ಪ್ರವೇಶಕ್ಕೆ ಅಭ್ಯರ್ಥಿಗಳು ಮುಂದಿನ ಸೂಚನೆಗಾಗಿ ಕಾಯ ಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಎಂಜಿನಿಯರಿಂಗ್ ಸೇರಿದಂತೆ ಯುಜಿಸಿಇಟಿ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಹಿಂದಿನ ಸುತ್ತಿನಲ್ಲಿ ಶುಲ್ಕ ಅಥವಾ ಠೇವಣಿ ಪಾವತಿಸಿದ್ದರೆ ಅದನ್ನು ಈ ಸುತ್ತಿನಲ್ಲಿ ಹಂಚಿಕೆಯಾದ ಸೀಟಿನ ಶುಲ್ಕಕ್ಕೆ ಹೊಂದಾಣಿಕೆ ಮಾಡಲಾಗುವುದು ಎಂದು ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.