ADVERTISEMENT

ಬಿ.ಎಸ್ಸಿ ನರ್ಸಿಂಗ್ ಅಂತಿಮ ಸುತ್ತು: ಆಯ್ಕೆಗೆ KEA ಅವಕಾಶ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 16:02 IST
Last Updated 3 ಅಕ್ಟೋಬರ್ 2025, 16:02 IST
<div class="paragraphs"><p>KEA ಬಿ.ಎಸ್ಸಿ ನರ್ಸಿಂಗ್</p></div>

KEA ಬಿ.ಎಸ್ಸಿ ನರ್ಸಿಂಗ್

   

ಬೆಂಗಳೂರು: ಬಿ.ಎಸ್ಸಿ ನರ್ಸಿಂಗ್, ಬಿ.ಫಾರ್ಮ, ಫಾರ್ಮ-ಡಿ ಕೋರ್ಸುಗಳಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಅ.6ರ ಬೆಳಿಗ್ಗೆ 11ರ ಒಳಗೆ ಹೊಸದಾಗಿ ತಮ್ಮ ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಸರ್ಕಾರಿ ಕಾಲೇಜುಗಳಲ್ಲಿರುವ ಸೀಟುಗಳು ಹಾಗೂ ಖಾಸಗಿ ಕಾಲೇಜುಗಳ ‘ಜಿ’ ಸೀಟುಗಳು ಈ ಹಂಚಿಕೆ ವ್ಯಾಪ್ತಿಗೆ ಒಳಪಡುತ್ತವೆ. ಅಭ್ಯರ್ಥಿಗಳು ಈ ಹಿಂದಿನ ಸುತ್ತುಗಳಲ್ಲಿ ದಾಖಲಿಸಿದ ಆಯ್ಕೆಗಳನ್ನು ಈ ಹಂತದ ಹಂಚಿಕೆಗೆ ಪರಿಗಣಿಸುವುದಿಲ್ಲ. ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಕಾಲೇಜು, ವರ್ಗ ಮತ್ತು ಕೋರ್ಸುವಾರು ವಿವರವಾದ ಸೀಟು ಲಭ್ಯತಾ ಪಟ್ಟಿ ನೋಡಿಕೊಂಡು ಆಯ್ಕೆ ನಮೂದಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಸೂಚಿಸಿದ್ದಾರೆ.   

ADVERTISEMENT

ಪಿಜಿ ನೀಟ್‌ಗೆ ಅ.4ರಿಂದ ಅರ್ಜಿ ಸಲ್ಲಿಕೆ: ರಾಜ್ಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಪದವಿ, ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅ.4ರಿಂದ ಅ.9 ಬೆಳಿಗ್ಗೆ 11ರ ಒಳಗೆ ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು. 

ಎಂ.ಬಿ.ಎ, ಎಂ.ಸಿ.ಎ ಫಲಿತಾಂಶ ಪ್ರಕಟ: ಎಂ.ಬಿ.ಎ, ಎಂ.ಸಿ.ಎ, ಎಂ.ಟೆಕ್, ಎಂ.ಇ, ಎಂ.ಆರ್ಕ್‌ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಫಲಿತಾಂಶಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಅ.4ರಂದು ಮಧ್ಯಾಹ್ನ 1ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬಹುದು. ಬಳಿಕ ಪರಿಶೀಲಿಸಿ, ಅದೇ ದಿನ ಸಂಜೆ ವೇಳೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರ ಹೇಳಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.