
ಪ್ರಜಾವಾಣಿ ವಾರ್ತೆ
ಬೆಂಗಳೂರು: ಸಬ್ ಇನ್‌ಸ್ಪೆಕ್ಟರ್ (ಪಿಎಸ್ಐ), ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ದಿನಾಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
402 ಪಿಎಸ್‌ಐ ಹುದ್ದೆಗಳಿಗೆ ಸೆ.22ರಂದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಾಯಕ ಲೆಕ್ಕಿಗ, ಸಹಾಯಕ ಸಂಚಾರ ನಿರೀಕ್ಷಕ, ಕುಶಲಕರ್ಮಿ, ತಾಂತ್ರಿಕ ಸಹಾಯಕ ಸೇರಿ 36 ಹುದ್ದೆಗಳಿಗೆ ಜುಲೈ 12ರಿಂದ 14ರವರೆಗೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್-ಸಿವಿಲ್, ಪ್ರಥಮ ದರ್ಜೆ ಲೆಕ್ಕ ಸಹಾಯಕರ 64 ಹುದ್ದೆಗಳಿಗೆ ಆ.11 ಪರೀಕ್ಷೆಗಳು ನಡೆಯಲಿವೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿರ್ವಾಹಕ- ದರ್ಜೆ-3 ಮೇಲ್ವಿಚಾರಕೇತರ 2,500 ಹುದ್ದೆಗಳಿಗೆ ಸೆ.1ರಂದು, 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅ.27ರಂದು ವೇಳಾಪಟ್ಟಿ ನಿಗದಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.