ಸಾಂದರ್ಭಿಕ ಚಿತ್ರ
ಬೆಂಗಳೂರು: ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್‌ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಜ.10 ಮತ್ತು 11ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆ ನಡೆಸುತ್ತಿದೆ.
ಜ.10ರಂದು ಬೆಂಗಳೂರು, ಕಲಬುರಗಿ ಮತ್ತು ಧಾರವಾಡದ 25 ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು 9,936 ಹಾಗೂ ಜ.11ರಂದು 12 ಜಿಲ್ಲೆಗಳ 259 ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು 1.03 ಲಕ್ಷ ಅಭ್ಯರ್ಥಿಗಳು ಬರೆಯುತ್ತಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.
'ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಜತೆಗೆ ಜಾಮರ್ ಹಾಕಿದ್ದು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿಯೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.