ADVERTISEMENT

664 ವಿದ್ಯಾರ್ಥಿಗಳ ರ್‍ಯಾಂಕ್ ಹಿಂಪಡೆದ ಕೆಇಎ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 21:00 IST
Last Updated 2 ಆಗಸ್ಟ್ 2022, 21:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಿಬಿಎಸ್‌ಇ, ಐಸಿಎಸ್ಇ ಪಠ್ಯಕ್ರಮದ 664 ಪುನರಾವರ್ತಿತವಿದ್ಯಾರ್ಥಿಗಳ ರ‍್ಯಾಂಕಿಂಗ್‌ ಹಿಂಪಡೆದಿದೆ. ಸಿಇಟಿ ಫಲಿತಾಂಶದಲ್ಲಿ ಈ ವಿದ್ಯಾರ್ಥಿಗಳ 12ನೇ ತರಗತಿ ಅಂಕ ಪರಿಗಣಿಸಲಾಗಿತ್ತು.

ಪಿಯು ವಿದ್ಯಾರ್ಥಿಗಳಿಂದ ಆಕ್ಷೇಪ ಬಂದ ನಂತರ ಪರಿಶೀಲನೆ ನಡೆಸಿ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್‌. ಅಶ್ವತ್ಥನಾರಾಯಣ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘24 ಸಾವಿರ ವಿದ್ಯಾರ್ಥಿಗಳಿಗೆ ಪಿಯು ಅಂಕ ಪರಿಗಣಿಸಿ, ರ‍್ಯಾಂಕಿಂಗ್ ಕೊಟ್ಟರೆ ಎರಡೂ ವರ್ಷ 3 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಈ ವಿಷಯದಲ್ಲಿ ಕೆಇಎ ನಿರ್ಧಾರ ಸರಿಯಾಗಿದೆ. ಪ್ರಾಧಿಕಾರದ ನಿರ್ಧಾರಕ್ಕೆ ಸರ್ಕಾರ ಬದ್ಧ. ಇದನ್ನು ಸಿಎಂ ಗಮನಕ್ಕೆ ತರಲಾಗಿದೆ. ಕೆಇಎ ನಿರ್ಧಾರ ತೃಪ್ತಿ ತಾರದಿದ್ದರೆ ಅಭ್ಯರ್ಥಿಗಳು ಕೋರ್ಟ್‌ ಮೊರೆ ಹೋಗಲು ಅವಕಾಶವಿದೆ’ ಎಂದರು.

ADVERTISEMENT

‘ನನ್ನ ಪ್ರಕಾರ ಈ‌ 24 ಸಾವಿರ ವಿದ್ಯಾರ್ಥಿಗಳಿಗೂ ವಿವಿಧ ಕಾಲೇಜುಗಳಲ್ಲಿ ಸೀಟು ಸಿಗುತ್ತದೆ. ಆತಂಕ ಬೇಡ’ ಎಂದು ಹೇಳಿದರು.

ಹಿಂದಿನ ವರ್ಷ ಪಿಯು ತೇರ್ಗಡೆಯಾಗಿದ್ದ 24 ಸಾವಿರ ವಿದ್ಯಾರ್ಥಿಗಳು ಈ ಬಾರಿಯೂ ಸಿಇಟಿ ಪರೀಕ್ಷೆ ಬರೆದಿದ್ದು, ರ‍್ಯಾಂಕ್‌ಗೆ ಪಿಯು ಅಂಕ ಪರಿಗಣಿಸಲು ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ. ಆ. 4ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.