ADVERTISEMENT

KEA KCET 2025 | ಸಿಇಟಿ: ಎರಡನೇ ಸುತ್ತಿನ ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2025, 14:37 IST
Last Updated 30 ಆಗಸ್ಟ್ 2025, 14:37 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಸೀಟು ಹಂಚಿಕೆಯಾದವರು ಸೆ.3ರ ಒಳಗೆ ಕಾಲೇಜುಗಳಿಗೆ ಪ್ರವೇಶ ಪಡೆಯಬೇಕು. 

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಎರಡನೇ ಸುತ್ತಿನ ಅಂತಿಮ ಫಲಿತಾಂಶವನ್ನು ಎಂಸಿಸಿ ಫಲಿತಾಂಶದ ನಂತರ ಪ್ರಕಟಿಸಲಾಗುವುದು. ಅಲ್ಲಿಯವರೆಗೂ ಯಾವುದೇ ಛಾಯ್ಸ್‌ ಆಯ್ಕೆಗೆ ಅವಕಾಶ ಇಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಹೇಳಿದ್ದಾರೆ.

ADVERTISEMENT

ಅಖಿಲ ಭಾರತ ಮಟ್ಟದ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗಿರುವುದರಿಂದ ಸಿಇಟಿ ಅಭ್ಯರ್ಥಿಗಳ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಅವರಿಗೆ ಅನುಕೂಲ ಮಾಡಿಕೊಡಲು ನಾಲ್ಕು ಛಾಯ್ಸ್‌ಗಳ ಆಯ್ಕೆಗೆ ಅವಕಾಶ ನೀಡಲಾಗಿದೆ.  ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳನ್ನು ಹೊರತುಪಡಿಸಿ, ಇತರ ಎಲ್ಲ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ  ಆರಂಭವಾಗಿದೆ. ಛಾಯ್ಸ್‌-1 ಮತ್ತು ಛಾಯ್ಸ್‌- 2 ಆಯ್ಕೆ ಮಾಡಿದವರಿಗೆ ಶುಲ್ಕ ಪಾವತಿಸಲು ಸೆ. 2ರವರೆಗೆ ಅವಕಾಶ ನೀಡಲಾಗಿದೆ. ಭಾನುವಾರ ಸೇರಿದಂತೆ ಎಲ್ಲ ಸಾರ್ವತ್ರಿಕ ರಜಾ ದಿನಗಳಲ್ಲೂ ಕಾಲೇಜುಗಳು ಕಾರ್ಯನಿರ್ವಹಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

‘ಸೀಟು ಹಂಚಿಕೆಯ ನಂತರ ಯಾವುದೇ ಛಾಯ್ಸ್‌ ಆಯ್ಕೆ ಮಾಡದವರನ್ನು ಸೀಟು ಹಂಚಿಕೆ ಪ್ರಕ್ರಿಯೆಯಿಂದ ಹೊರ ಹಾಕಲಾಗುತ್ತದೆ. ಮತ್ತೆ ಒಳ ಬರಲು ಅವಕಾಶ ಇಲ್ಲ’ ಎಂದು ವಿವರಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.