ಬೆಂಗಳೂರು: ‘ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ರ‍್ಯಾಂಕ್ ತಡೆಹಿಡಿದಿದ್ದ ಮತ್ತು ರ‍್ಯಾಂಕ್ ನೀಡದಿದ್ದ ಸುಮಾರು 1,500 ವಿದ್ಯಾರ್ಥಿಗಳು ಮೊದಲ ದಿನವೇ ತಮ್ಮ ಅಂಕಗಳನ್ನು ಅಪ್‌ಡೇಟ್ ಮಾಡಿಕೊಂಡಿದ್ದು, ಆ ಎಲ್ಲ ವಿದ್ಯಾರ್ಥಿಗಳಿಗೆ ಮಂಗಳವಾರ ಸ್ಪಾಟ್ ರ‍್ಯಾಂಕ್ ನೀಡಲಾಗುವುದು’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
‘ಪಿಯುಸಿಯಲ್ಲಿ ನೀಡುವ ವಿಶಿಷ್ಟ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿರುವ ಸುಮಾರು 3 ಸಾವಿರ ಅಭ್ಯರ್ಥಿಗಳಿಗೆ ರ‍್ಯಾಂಕ್ ಘೋಷಣೆ ಆಗಿಲ್ಲ. ಅವರಿಗೆ ಅಪ್‌ಡೇಟ್ ಮಾಡಿಕೊಳ್ಳಲು ಪ್ರತ್ಯೇಕ ಲಿಂಕ್ ಅನ್ನು ಕೆಇಎ ಸೋಮವಾರ ಪ್ರಕಟಿಸಿತ್ತು. ಸೋಮವಾರ ಬೆಳಿಗ್ಗೆಯಿಂದಲೇ ಸರಾಗವಾಗಿ ವಿದ್ಯಾರ್ಥಿಗಳು ಅಂಕಗಳನ್ನು ಅಪ್ ಡೇಟ್ ಮಾಡಿಕೊಂಡಿದ್ದಾರೆ’ ಎಂದು ಅವರು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.