ADVERTISEMENT

8 ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 16:02 IST
Last Updated 10 ಅಕ್ಟೋಬರ್ 2025, 16:02 IST
<div class="paragraphs"><p>ಕರ್ನಾಟಕ ಪರೀಕ್ಷಾ ಪ್ರಾಧಿಕಾರ</p></div>

ಕರ್ನಾಟಕ ಪರೀಕ್ಷಾ ಪ್ರಾಧಿಕಾರ

   

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಸೇರಿದಂತೆ ಎಂಟು ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

ಕೃಷಿ ಮಾರಾಟ ಇಲಾಖೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ತಾಂತ್ರಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಖಾಲಿ ಹುದ್ದೆಗಳಿಗೆ ಸ್ಪರ್ಧಾ ಪರೀಕ್ಷೆ ಮೂಲಕ ನೇಮಕ‌ ಮಾಡಲಾಗುತ್ತಿದೆ. ಅ.9ರಿಂದ ನ.11ರವರೆಗೆ ಅರ್ಜಿ ಸಲ್ಲಿಸಬಹುದು. ಒಎಂಆರ್ ಆಧಾರಿತ ಪರೀಕ್ಷೆ, ಋಣಾತ್ಮಕ ಮೌಲ್ಯಮಾಪನ ಅಳವಡಿಸಲಾಗಿದ್ದು, ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದರಷ್ಟು (1/4) ಅಂಕ ಕಡಿತ ಮಾಡಲಾಗುತ್ತದೆ. ಒಂದೇ ಪಠ್ಯಕ್ರಮ ಇರುವ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಂದೇ ಪರೀಕ್ಷೆ ನಡೆಸಲಾಗುತ್ತದೆ.

ADVERTISEMENT

ಕಲ್ಯಾಣ ಕರ್ನಾಟಕಕ್ಕೆ 321, ಮೂಲ ವೃಂದದ 387 ಹುದ್ದೆಗಳನ್ನು ಮೀಸಲಿಡಲಾಗಿದ್ದು, ಒಳ ಮೀಸಲಾತಿಯೂ ಅನ್ವಯವಾಗಲಿದೆ. ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಜಿಯಲ್ಲೇ ತಮ್ಮ ಗುಂಪುಗಳನ್ನು ನಮೂದಿಸಬೇಕು. ವಿವರಗಳಿಗೆ http://cetonline.Karnataka.gov.in/kea/ ಭೇಟಿ ನೀಡಬೇಕು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.