ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅ. 27ರಂದು ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ.
ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದಿರುವ ಹಾಗೂ ಪತ್ರಿಕೆ -1 ಮತ್ತು ಪತ್ರಿಕೆ- 2ರಲ್ಲಿ ಕನಿಷ್ಠ ಶೇ 35ರಷ್ಟು ಅಂಕ ಪಡೆದಿರುವ ಅರ್ಹರ ಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.
ಈ ಅಂಕ ಪಟ್ಟಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗುವುದು. ಅಂತಿಮವಾಗಿ ಆಯ್ಕೆ ಪಟ್ಟಿಯನ್ನು ಅವರೇ ಪ್ರಕಟಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.