
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ಕಾರಣ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮರು ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ಹಿಂದೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಡಿ.27 ಮತ್ತು 28ರಂದು ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.
ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗಿತ್ತು ಎಂಬ ಮಾಹಿತಿಯನ್ನು ನಮೂದಿಸಬೇಕು. ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಎಂದು ಸಲಹೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.