ಬೆಂಗಳೂರು: ಮುಖ್ಯಮಂತ್ರಿಯಾಗಿ ಎಚ್.ಡಿ. ಕುಮಾರಸ್ವಾಮಿ ಅವರು ಐದು ವರ್ಷ ಪೂರೈಸುವಂತೆ ನೋಡಿಕೊಳ್ಳುವ ಜವಾಬ್ದಾರಿ ಡಿ.ಕೆ.ಶಿವಕುಮಾರ್ ಅವರದು, ಇವರಿಬ್ಬರೂ ಡೈನಾಮಿಕ್ ನಾಯಕರಿದ್ದಂತೆ. ಇಬ್ಬರು ಸೇರಿದರೆ ದೇಶದಲ್ಲಿ ಮಹಾಕ್ರಾಂತಿ ಆಗುತ್ತದೆ ಎಂದು ನಂಜಾವಧೂತ ಸ್ವಾಮೀಜಿ ಹೇಳಿದರು.
ಕುಮಾರಸ್ವಾಮಿ ಐದು ವರ್ಷ ಅಧಿಕಾರ ಪೂರ್ಣಗೊಳಿಸಲು ಎಲ್ಲರೂ ಅವಕಾಶ ನೀಡಬೇಕು ಎಂದು ಇದೇ ವೇಳೆ ಮನವಿ ಮಾಡಿದರು.
ರಾಜ್ಯ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಡ್ಡಿಪಡಿಸಿದರೆ ರಾಜ್ಯದ ಜನ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಪಠ್ಯದಲ್ಲಿ ಕೆಂಪೇಗೌಡರ ಇತಿಹಾಸ...
ಶಾಲಾ–ಕಾಲೇಜುಗಳ ಪಠ್ಯ ಪುಸ್ತಕದಲ್ಲಿ ಕೆಂಪೇಗೌಡರ ಇತಿಹಾಸ ಸೇರಿಸಬೇಕು. ಜತೆಗೆ, ಬೆಂಗಳೂರಿನ ಒಂದು ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ಇಡಬೇಕು. ಹೊಸ ಪೀಳಿಗೆಯ ಜನರಿಗೆ ನಗರದ ಇತಿಹಾಸ ತಿಳಿಸುವ ಕೆಲಸ ಆಗಬೇಕು. ನಗರದಲ್ಲಿ ಶಾಶ್ವತವಾದ ಭವ್ಯ ಕಟ್ಟಡ ನಿರ್ಮಿಸಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಚಿವ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.