ADVERTISEMENT

ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆ: ಸಿಎಂ ಬೊಮ್ಮಾಯಿ ಭರವಸೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 8:58 IST
Last Updated 27 ಜೂನ್ 2022, 8:58 IST
ಬಸವರಾಜ ಬೊಮ್ಮಾಯಿ - ಸಂಗ್ರಹ ಚಿತ್ರ
ಬಸವರಾಜ ಬೊಮ್ಮಾಯಿ - ಸಂಗ್ರಹ ಚಿತ್ರ   

ಬೆಂಗಳೂರು: ರಾಜ್ಯ ರಾಜಧಾನಿಯ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸೋಮವಾರ ನಡೆದ ನಾಡಪ್ರಭು ಕೆಂಪೇಗೌಡರ 513ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ ಅವರ ಬೇಡಿಕೆಗೆ ಅವರು ಪ್ರತಿಕ್ರಿಯಿಸಿದರು.

ಕೆಂಪೇಗೌಡರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಬಿಬಿಎಂಪಿ ಆಡಳಿತ 2017ರಲ್ಲೇ ನಿರ್ಣಯ ಕೈಗೊಂಡಿತ್ತು. ₹12 ಲಕ್ಷ ಅನುದಾನವನ್ನೂ ಮೀಸಲಿಟ್ಟಿತ್ತು. ಆದರೆ, ಪ್ರತಿಮೆ ಸ್ಥಾಪನೆ ಆಗಿಲ್ಲ. ಮುಂದಿನ ವರ್ಷದ ಕೆಂಪೇಗೌಡರ ಜಯಂತಿ ಸಮಾರಂಭದ ಒಳಗಾಗಿ ವಿಧಾನಸೌಧದ ಆವರಣದಲ್ಲಿ ಪ್ರತಿಮೆ ಸ್ಥಾಪಿಸಲಾಗುವುದು ಎಂದರು.

ADVERTISEMENT

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಸ್ಥಾಪನೆ ಕಾಮಗಾರಿ ಅಂತಿಮ ಹಂತದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಟಿಸುವ ಯೋಚನೆ ಇದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.