ADVERTISEMENT

ಸಂಸತ್‌ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ದೇವೇಗೌಡ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2022, 19:31 IST
Last Updated 6 ನವೆಂಬರ್ 2022, 19:31 IST
ಎಚ್.ಡಿ.ದೇವೇಗೌಡ
ಎಚ್.ಡಿ.ದೇವೇಗೌಡ   

ಬೆಂಗಳೂರು: ಸಂಸತ್‌ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯಸಭಾ ಸದಸ್ಯರೂ ಆಗಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು ಸಂಸ್ಥಾಪಕ ಕೆಂಪೇಗೌಡ ಕೇಂದ್ರ ಸಮಿತಿ ಸಲ್ಲಿಸಿರುವ ಮನವಿಯನ್ನು ಲಗತ್ತಿಸಿ ಭಾನುವಾರ ಪತ್ರ ಬರೆದಿರುವ ಅವರು, ‘16ನೇ ಶತಮಾನದಲ್ಲಿ ಕೆಂಪೇಗೌಡರು ಬೆಂಗಳೂರನ್ನು ನಿರ್ಮಿಸಿದರು. ಅವರು ಬಿತ್ತಿದ ಬೀಜಗಳು ಹೆಮ್ಮರವಾಗಿ ಅಂತರರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿವೆ’ ಎಂದು ಹೇಳಿದ್ದಾರೆ.

ಬೆಂಗಳೂರು ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಕೇಂದ್ರವಾಗಿರುವುದಕ್ಕೆ ಕೆಂಪೇಗೌಡರು ಆರಂಭದ ದಿನಗಳಲ್ಲಿ ಕೈಗೊಂಡ ಕ್ರಮಗಳೂ ಕಾರಣ. ದೇಶದ ಬೇರೆ ಯಾವ ನಗರಗಳಲ್ಲೂ ಇಷ್ಟೊಂದು ಸಂಖ್ಯೆಯ ಸರ್ಕಾರಿ ಮತ್ತು ಖಾಸಗಿ ವೈಜ್ಞಾನಿಕ ಹಾಗೂ ತಾಂತ್ರಿಕ ಸಂಶೋಧನಾ ಸಂಸ್ಥೆಗಳು ಇಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.