ADVERTISEMENT

ಮೂಡ್ನಾಕೂಡು ಚಿನ್ನಸ್ವಾಮಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2023, 19:30 IST
Last Updated 11 ಮಾರ್ಚ್ 2023, 19:30 IST
ಕೇಂದ್ರ ಸಾಹಿತ್ಯ ಅಕಾಡೆಮಿಯ ಈ ವರ್ಷದ ಪುಸ್ತಕ ಪ್ರಶಸ್ತಿಯನ್ನು ಕನ್ನಡದ ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರಿಗೆ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ಮಾಧವ ಕೌಶಿಕ್‌ ಶನಿವಾರ ಪ್ರದಾನ ಮಾಡಿದರು
ಕೇಂದ್ರ ಸಾಹಿತ್ಯ ಅಕಾಡೆಮಿಯ ಈ ವರ್ಷದ ಪುಸ್ತಕ ಪ್ರಶಸ್ತಿಯನ್ನು ಕನ್ನಡದ ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರಿಗೆ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ಮಾಧವ ಕೌಶಿಕ್‌ ಶನಿವಾರ ಪ್ರದಾನ ಮಾಡಿದರು   

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿಯನ್ನು ಕನ್ನಡದ ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರಿಗೆ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ಮಾಧವ ಕೌಶಿಕ್‌ ಶನಿವಾರ ಪ್ರದಾನ ಮಾಡಿದರು.

ನವದೆಹಲಿಯಲ್ಲಿ ನಡೆದ ಅಕಾಡೆಮಿಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮೂಡ್ನಾಕೂಡು ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ’ ಕೃತಿಗೆ ಈ ಪ್ರಶಸ್ತಿ ನೀಡಲಾಗಿದ್ದು, ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. 'ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ' ಕೃತಿಯು ವಿವಿಧ ಪ್ರಬಂಧಗಳ ಸಂಕಲನವಾಗಿದ್ದು ಇದನ್ನು ಗದಗದ ಲಡಾಯಿ ಪ್ರಕಾಶನ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT