ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿಯು 2019 ನೇ ಸಾಲಿನಪ್ರಶಸ್ತಿಯನ್ನು ಬುಧವಾರ ಪ್ರಕಟಿಸಿದ್ದು, ಹಿರಿಯ ಲೇಖಕಿ ವಿಜಯಾ ಅವರ ಆತ್ಮಕಥನ ‘ಕುದಿ ಎಸರು’ ಕೃತಿಗೆ ಪ್ರಶಸ್ತಿ ಸಂದಿದೆ.
ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. 2020ರ ಫೆಬ್ರುವರಿ 25ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ತಿಳಿಸಿದೆ.
ಸಾಹಿತಿಗಳಾದ ಬಿ.ಆರ್.ಲಕ್ಷ್ಮಣ ರಾವ್, ಡಾ.ನಾ.ದಾಮೋದರ ಶೆಟ್ಟಿ, ಡಾ.ಲತಾ ಗುತ್ತಿ ಆಯ್ಕೆ ಸಮಿತಿಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.