ನವದೆಹಲಿ: ಚಿತ್ರದುರ್ಗ ಜಿಲ್ಲೆಯ ಕುಂಚಿಗನಾಲ್ ಗ್ರಾಮದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಕುರಿತು ಕಾರ್ಯಸಾಧ್ಯತಾ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ತಿಳಿಸಿದರು.
ಲೋಕಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಗೋವಿಂದ ಕಾರಜೋಳ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಪ್ರಸ್ತಾವನೆ ಪರಿಶೀಲನೆಯ ಹಂತದಲ್ಲಿದೆ. ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ’ ಎಂದರು.
ಕಾರಜೋಳ ಮಾತನಾಡಿ, ‘ಚಿತ್ರದುರ್ಗ ಕ್ಷೇತ್ರವು ದೇಶದಲ್ಲೇ ಹಿಂದುಳಿದಿದೆ. ಕ್ಷೇತ್ರದ ಶೇ 52ರಷ್ಟು ಮಂದಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಕಾಡುಗೊಲ್ಲ ಸಮುದಾಯದವರು. ಅವರು ಕಡು ಬಡವರು. ಅವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುತ್ತಿಲ್ಲ. ಕ್ಷೇತ್ರದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.