ADVERTISEMENT

ಡಾ.ಪದ್ಮಾ ಸುಬ್ರಹ್ಮಣ್ಯಗೆ ‘ಕೆರೆಮನೆ ಶಿವರಾಮ ಹೆಗಡೆ’ ಪ್ರಶಸ್ತಿ 

​ಪ್ರಜಾವಾಣಿ ವಾರ್ತೆ
Published 4 ಜನವರಿ 2020, 12:59 IST
Last Updated 4 ಜನವರಿ 2020, 12:59 IST
ಡಾ.ಪದ್ಮಾ ಸುಬ್ರಹ್ಮಣ್ಯ
ಡಾ.ಪದ್ಮಾ ಸುಬ್ರಹ್ಮಣ್ಯ   

ಹೊನ್ನಾವರ (ಉತ್ತರ ಕನ್ನಡ): ತಾಲ್ಲೂಕಿನ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ, ಕೆರೆಮನೆ ಪ್ರದಾನ ಮಾಡುವ ‘ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ’ಯನ್ನು ಭರತನಾಟ್ಯ ಕಲಾವಿದೆ ಡಾ.ಪದ್ಮಾ ಸುಬ್ರಹ್ಮಣ್ಯ ಅವರಿಗೆಪ್ರಕಟಿಸಲಾಗಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ.

ಇದೇ ಮಂಡಳಿಯ‘ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ’ಗೆ ಪ್ರಸಿದ್ಧ ಯಕ್ಷಗಾನ ಚಂಡೆವಾದಕ ಕೃಷ್ಣ ಯಾಜಿ ಇಡಗುಂಜಿ ಅವರನ್ನು ಆಯ್ಕೆ ಮಾಡಲಾಗಿದೆ.ಈ ಪ್ರಶಸ್ತಿಯಲ್ಲಿ ₹15 ಸಾವಿರ ನಗದು ಸೇರಿದೆ.

‘ಫೆ.20ರಿಂದ 24ರವರೆಗೆ ಗುಣವಂತೆಯ ಯಕ್ಷಾಂಗಣದಲ್ಲಿ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ ನಡೆಯಲಿದೆ. ಆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಮಂಡಳಿಯ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.