ADVERTISEMENT

ಕೆಜಿಐಡಿ: ಆನ್‌ಲೈನ್‌ನಲ್ಲೇ ಎಲ್ಲ ಸೇವೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2022, 18:28 IST
Last Updated 10 ಅಕ್ಟೋಬರ್ 2022, 18:28 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ಕರ್ನಾಟಕ ಸರ್ಕಾರಿ ವಿಮಾ ಇಲಾಖೆ (ಕೆಜಿಐಡಿ) ಸೇವೆಗಳು 22 ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಕಂಪ್ಯೂಟರೀಕರಣಗೊಂಡಿದೆ. ಕೆಜಿಐಡಿ ಪಾಲಿಸಿಗಳ ಮೇಲೆ ಸಾಲಪಡೆಯುವುದು, ಅವಧಿ ಮುಗಿದ ಪಾಲಿಸಿಗಳ ಮೊತ್ತ ಪಾವತಿ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಆನ್‌ಲೈನ್‌ ಮೂಲಕವೇ ನಡೆಸುವಂತೆ ಆದೇಶ ಹೊರಡಿಸಲಾಗಿದೆ.

ಕೆಜಿಐಡಿ ಸೇವೆಗಳನ್ನು ಕಂಪ್ಯೂಟರೀಕರಣ ಮಾಡುವ ಯೋಜನೆಯನ್ನು ಬೆಂಗಳೂರು ನಗರ, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ಮಂಡ್ಯ, ಮೈಸೂರು, ಕೊಡಗು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ತರಲಾಗಿತ್ತು.ಸೋಮವಾರದಿಂದ22 ಜಿಲ್ಲೆಗಳಲ್ಲಿಜಾರಿಗೊಳಿಸಿದ್ದು,ನಂತರ ಎಲ್ಲಜಿಲ್ಲೆಗಳಲ್ಲೂ ಅನುಷ್ಠಾನಕ್ಕೆತರಲಾಗುವುದುಎಂದು ಕೆಜಿಐಡಿನಿರ್ದೇಶಕರು ತಿಳಿಸಿದ್ದಾರೆ.

‘ಇನ್ನು ಮುಂದೆ ಕೆಜಿಐಡಿ ಪಾಲಿಸಿಗಳ ಮೇಲೆ ಸಾಲ ಮಂಜೂರಾತಿ ಹಾಗೂ ಅವಧಿ ಮುಗಿದ ಪ್ರಕರಣಗಳ ಇತ್ಯರ್ಥಕ್ಕೆ ಭೌತಿಕ ಕಡತಗಳನ್ನು ನಿರ್ವಹಿಸುವಂತಿಲ್ಲ. ಆನ್‌ಲೈನ್‌ನಲ್ಲಿ ತಂತ್ರಾಂಶದ ಮೂಲಕವೇ ಪ್ರಕ್ರಿಯೆ ನಡೆಸಿ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು. ಭೌತಿಕವಾಗಿ ಕಡತ ನಿರ್ವಹಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು’ ಎಂದು ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ADVERTISEMENT

‘ಹೆಚ್ಚುವರಿ ಹಣ ಪಾವತಿಯಾದರೆ ಸಂಬಂಧಿಸಿದ ಅಧಿಕಾರಿಗಳೇ ಜವಾಬ್ದಾರರಾಗಿರುತ್ತಾರೆ. ಉಪ ನಿರ್ದೇಶಕರು ಮತ್ತು ನಿರ್ದೇಶಕರಿಂದ ಅನುಮೋದನೆ ಪಡೆಯಬೇಕಾದ ಪ್ರಕರಣಗಳಲ್ಲೂ ಭೌತಿಕ ಕಡತ ಸಲ್ಲಿಸುವ ಅಗತ್ಯವಿಲ್ಲ. ಆನ್‌ಲೈನ್‌ ಮೂಲಕವೇ ಅನುಮೋದನೆ ಕೋರಬೇಕು’ ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.