ಜಿ. ಪರಮೇಶ್ವರ
ಬೆಂಗಳೂರು: ‘ಸಚಿವ ಕೆ.ಎಚ್. ಮುನಿಯಪ್ಪ ಅವರು ಮುಖ್ಯಮಂತ್ರಿ ಆದರೆ ಸಂತೋಷ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
‘ಮುನಿಯಪ್ಪ ಮುಖ್ಯಮಂತ್ರಿ ಆಗಲಿ’ ಎಂದು ಶಿವಮೊಗ್ಗದಲ್ಲಿ ಘೋಷಣೆ ಕೂಗಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ ‘ಮುನಿಯಪ್ಪ ಅವರು ಏಳು ಬಾರಿ ಸಂಸದರಾಗಿದ್ದವರು. ಇದು ಸಾಮಾನ್ಯವಲ್ಲ. ಪಕ್ಷದಲ್ಲಿ ಹಿರಿಯರು, ಕೇಂದ್ರದಲ್ಲಿ ಸಚಿವರಾಗಿ ದ್ದರು. ಅವರು ಸಮರ್ಥರಿದ್ದು, ಅರ್ಹತೆಯೂ ಇದೆ’ ಎಂದರು.
‘ನಾವೆಲ್ಲ ಒಂದು ವರ್ಗಕ್ಕೆ ಸೇರಿದ್ದೇವೆ. ಆ ವರ್ಗಕ್ಕೆ ಅವಕಾಶ ಸಿಕ್ಕಿತಲ್ಲ ಎಂದೂ ಸಂತೋಷ ಆಗುತ್ತದೆ. ಯಾವ ವರ್ಗ ತುಳಿತಕ್ಕೆ ಒಳಗಾಗಿತ್ತು, ಆ ವರ್ಗಕ್ಕೆ ಆಡಳಿತ ಸಿಗುತ್ತದೆ ಅಂದರೆ ಸಂತೋಷ ಅಲ್ಲವೇ? ಆದರೆ, ನಾವು ಇಲ್ಲಿ ಕುಳಿತುಕೊಂಡು ನಾಲ್ಕು ಜನ ಹೇಳಿದರೆ ಆಗುವುದಿಲ್ಲ. ಹೈಕಮಾಂಡ್‌ನವರು ವಿಶ್ಲೇಷಣೆ ಮಾಡುತ್ತಾರೆ’ ಎಂದರು.
‘ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್‌ನಿಂದ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಮುನ್ಸೂಚನೆಯೂ ಇಲ್ಲ. ಹೈಕಮಾಂಡ್ ತಿಳಿಸುವವರೆಗೂ ಯಾವುದಕ್ಕೂ ಮಹತ್ವ ಇರುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.