ADVERTISEMENT

ಖಾದಿ ನೇಕಾರರಿಗೆ ₹24.26 ಕೋಟಿ ಪ್ರೋತ್ಸಾಹ ಧನ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2022, 11:37 IST
Last Updated 3 ಜೂನ್ 2022, 11:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಖಾದಿ ನೇಕಾರರಿಗೆ ಕಳೆದ ಎರಡು ವರ್ಷಗಳಿಂದ ನೀಡಬೇಕಿದ್ದ ₹24.26 ಕೋಟಿ ಬಾಕಿ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ.

ರಾಜ್ಯದ ಉಣ್ಣೆ ಮತ್ತು ಅರಳೆ ಖಾದಿ ಕೈಮಗ್ಗ ನೇಕಾರರು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಕಾರಣಕ್ಕಾಗಿ ರಾಜ್ಯ ಸರ್ಕಾರ ಪ್ರತಿ ವರ್ಷ ಪ್ರೋತ್ಸಾಹ ಮಜೂರಿ ನೀಡುತ್ತದೆ. ಆದರೆ,ಕೊವಿಡ್ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಆ ಹಣ ಹಂಚಿಕೆಯಾಗದೆ ಬಾಕಿ ಉಳಿದುಕೊಂಡಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯ ಉಣ್ಣೆ ಮತ್ತು ಅರಳೆ ಖಾದಿ ಕೈಮಗ್ಗ ನೇಕಾರರ ಸಹಕಾರ ಸಂಘ ಪ್ರೋತ್ಸಾಹ ಮಜೂರಿಯನ್ನು ಬಿಡುಗಡೆ ಮಾಡಿ ನೆರವಾಗುವಂತೆ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ಅವರಿಗೆ ಮನವಿ ಸಲ್ಲಿಸಿತ್ತು. ಅದಕ್ಕೆ ಸಂದಿಸಿದ ಸಚಿವರು ಮುಖ್ಯಮಂತ್ರಿಗಳ ಗಮನ ಸೆಳೆದು ಬಾಕಿ ಹಣ ಬಿಡುಗಡೆ ಮಾಡುವಂತೆ ವಿನಂತಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.