ADVERTISEMENT

ಖರ್ಗೆ– ಎಚ್‌ಡಿಕೆ ಮಾತುಕತೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 19:55 IST
Last Updated 19 ಜೂನ್ 2019, 19:55 IST
   

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ನಗರ ಪೊಲೀಸ್ ಕಮಿಷನರ್ ಸುನಿಲ್ ಕುಮಾರ್ ವರ್ಗಾವಣೆ ಬಗ್ಗೆ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಅಧಿಕಾರಿಯನ್ನು ಯಾವ ಕಾರಣಕ್ಕೆ ವರ್ಗಾವಣೆ ಮಾಡಬೇಕಾಯಿತು ಎಂದು ಸ್ಪಷ್ಟಪಡಿಸಿದ್ದಾರೆ. ಈ ಸಂದರ್ಭದಲ್ಲಿ ರಾಜಕೀಯ ವಿಚಾರಗಳೂ ಚರ್ಚೆಯಾಗಿವೆಎಂದು ಮೂಲಗಳು ತಿಳಿಸಿವೆ.

ಮೈತ್ರಿ ಸರ್ಕಾರದ ಬಗ್ಗೆ ಕೆಲ ನಾಯಕರು ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿರುವ ವಿಚಾರವೂ ಚರ್ಚೆಯಾಗಿದೆ. ಮೈತ್ರಿ ಪಕ್ಷಗಳ ನಾಯಕರು ಒಟ್ಟಾಗಿ ಸರ್ಕಾರ ಮುನ್ನಡೆಸಬೇಕಿದ್ದು, ಕಾಂಗ್ರೆಸ್ ಮುಖಂಡರು ಸಾರ್ವಜನಿಕವಾಗಿ ಹೇಳಿಕೆ ನೀಡದಂತೆ ನೋಡಿಕೊಳ್ಳಲು ಸಲಹೆ ಮಾಡಿದ್ದಾರೆ. ಇದಕ್ಕೆ ಖರ್ಗೆ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಈ ವಿಚಾರವನ್ನೂ ಖರ್ಗೆ ಗಮನಕ್ಕೆ ಮುಖ್ಯಮಂತ್ರಿ ತಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.