ADVERTISEMENT

ಕೆಐಎಡಿಬಿ | ಪಂಚಾಯಿತಿಗೆ ತೆರಿಗೆ ಅಧಿಕಾರವಿಲ್ಲ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 15:44 IST
Last Updated 9 ಜುಲೈ 2025, 15:44 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಅಧಿಸೂಚಿತ ಮತ್ತು ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕಾ ಸಂಸ್ಥೆಗಳಿಂದ ತೆರಿಗೆ ವಿಧಿಸಲು ಅಥವಾ ಸಂಗ್ರಹಿಸಲು ಗ್ರಾಮ ಪಂಚಾಯಿತಿಗಳಿಗೆ ಕಾನೂನಿನಲ್ಲಿ ಯಾವುದೇ ಅಧಿಕಾರ ಇಲ್ಲ’ ಎಂದು ಹೈಕೋರ್ಟ್‌ ಆದೇಶಿಸಿದೆ.

ನೆಲಮಂಗಲದ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿನ ಕೈಗಾರಿಕಾ ಸಂಸ್ಥೆಗಳಿಗೆ ಸೋಂಪುರ ಗ್ರಾಮ ಪಂಚಾಯಿತಿ ಆಸ್ತಿ ತೆರಿಗೆ ಪಾವತಿಸಲು ನೀಡಿರುವ ನೋಟಿಸ್‌ಗಳನ್ನು ಪ್ರಶ್ನಿಸಿ ಕಲ್ಪತರು ಬ್ರೂವರೀಸ್‌ ಮತ್ತು ಡಿಸ್ಟಿಲರೀಸ್‌ ಪ್ರೈವೇಟ್‌ ಲಿಮಿಟೆಡ್‌ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಕೈಗಾರಿಕಾ ಪ್ರದೇಶಗಳಲ್ಲಿ ತೆರಿಗೆ ವಿಧಿಸುವ ಮತ್ತು ಸಂಗ್ರಹಿಸುವ ಹಕ್ಕು ಸೇರಿದಂತೆ ಅಭಿವೃದ್ಧಿ ಚಟುವಟಿಕೆಗಳನ್ನು ನಿಯಂತ್ರಿಸುವ ಮತ್ತು ಅನುಮೋದಿಸುವ ಅಧಿಕಾರವು ಕೆಐಎಡಿಬಿಗೆ ಮಾತ್ರ ಇದೆ. ನಿರ್ದಿಷ್ಟವಾದ ಶಾಸನಬದ್ಧ ಸಮ್ಮತಿಯ ಅನುಪಸ್ಥಿತಿಯಲ್ಲಿ ಗ್ರಾಮ ಪಂಚಾಯತಿಗಳು ತೆರಿಗೆ ವಿಧಿಸುವ ಅಧಿಕಾರ ಹೊಂದಿಲ್ಲ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಸೋಂಪುರ ಗ್ರಾಮ ಪಂಚಾಯತಿ ಕೈಗಾರಿಕಾ ಸಂಸ್ಥೆಗಳಿಗೆ ಆಸ್ತಿ ತೆರಿಗೆ ಪಾವತಿಸುವಂತೆ ಅರ್ಜಿದಾರರಿಗೆ ನೀಡಿದ್ದ ನೋಟಿಸ್‌ಗಳನ್ನು ನ್ಯಾಯಪೀಠ ರದ್ದುಪಡಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.