ADVERTISEMENT

ಪ್ರತಿ ರೈತನಿಗೂ ಕೇಂದ್ರದ ₹6,000+ರಾಜ್ಯದ ₹4,000= ₹10 ಸಾವಿರ: ಯಡಿಯೂರಪ್ಪ ಘೋಷಣೆ

ಕಿಸಾನ್‌ ಸಮ್ಮಾನ್‌ ಯೋಜನೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2019, 4:44 IST
Last Updated 27 ಜುಲೈ 2019, 4:44 IST
   

ಬೆಂಗಳೂರು:ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ಪೀಕರಿಸುತ್ತಿದ್ದಂತೆ ಬಿ.ಎಸ್‌.ಯಡಿಯೂರಪ್ಪ ಅವರು ರೈತರು ಮತ್ತು ನೇಕಾರರಿಗೆ ಮೊದಲ ಕೊಡುಗೆಯನ್ನು ಘೋಷಿಸಿದರು.

‘ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌’ ಯೋಜನೆಗೆ ಪೂರಕವಾಗಿ ಪ್ರತಿ ರೈತನಿಗೂ ಎರಡು ಕಂತುಗಳಲ್ಲಿ ₹ 4,000 ನೀಡಲಾಗುವುದು ಎಂದು ಯಡಿಯೂರಪ್ಪ ಪ್ರಕಟಿಸಿದರು.

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಅಲ್ಲಿಂದ ನೇರವಾಗಿ ವಿಧಾನಸೌಧಕ್ಕೆ ಬಂದ ಅವರು, ಸಚಿವ ಸಂಪುಟ ಸಭೆ ನಡೆಸಿ ತೀರ್ಮಾನ ತೆಗೆದುಕೊಂಡರು. ಸಭೆಯ ನಂತರ ಸುದ್ದಿಗಾರರಿಗೆ ಸಭೆಯ ನಿರ್ಧಾಗಳನ್ನು ತಿಳಿಸಿದರು.

ADVERTISEMENT

ರೈತರಿಗೆ ರಾಜ್ಯ ಸರ್ಕಾರದಿಂದ ನೆರವು ನೀಡಲು ಕೈಗೊಂಡಿರುವ ಈ ನಿರ್ಧಾರದಿಂದ ಕೇಂದ್ರದ ₹6,000 ಸೇರಿ ವರ್ಷಕ್ಕೆ ₹10,000 ಸಿಗಲಿದೆ.

ನೇಕಾರರ ₹100 ಕೋಟಿ ಸಾಲ ಮನ್ನಾ

ಅಲ್ಲದೆ, 2019 ಫೆಬ್ರುವರಿ 30ರ ವರೆಗೆ ಬಾಕಿ ಉಳಿದಿರುವ ನೇಕಾರರ ₹100 ಕೋಟಿ ಸಾಲ ಮನ್ನಾ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

* ದ್ವೇಷದ ರಾಜಕಾರಣ ಮಾಡುವುದಿಲ್ಲ. ದೂಷಿಸಿದವರನ್ನೂ ಪ್ರೀತಿಯಿಂದ ಕಾಣುತ್ತೇನೆ. ನಿಂದಿಸಿದವರನ್ನು ಮರೆತು, ಕ್ಷಮಿಸುತ್ತೇನೆ
- ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.