ADVERTISEMENT

ನವೆಂಬರ್‌ನಲ್ಲಿ ಅಭಿವೃದ್ಧಿ ಕ್ರಾಂತಿ: ಕೆ.ಜೆ.ಜಾರ್ಜ್‌

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2025, 22:00 IST
Last Updated 30 ಅಕ್ಟೋಬರ್ 2025, 22:00 IST
<div class="paragraphs"><p>ಕೆ.ಜೆ.ಜಾರ್ಜ್‌</p></div>

ಕೆ.ಜೆ.ಜಾರ್ಜ್‌

   

ಹೊಸಕೋಟೆ: ‘ನವೆಂಬರ್ ಕ್ರಾಂತಿಗೀತಿ ಏನೂ ಇಲ್ಲ. ನಮ್ಮ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳು ರಾಜ್ಯದಲ್ಲಿ ಕ್ರಾಂತಿ ಮಾಡುತ್ತಿವೆ ಅಷ್ಟೇ’ ಎಂದು ಸಚಿವ ಕೆ.ಜೆ.ಜಾರ್ಜ್‌ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್ ₹300 ಕೋಟಿ ಹಣ ನೀಡಿದೆ ಎಂಬ ಬಿಜೆಪಿಯವರ ಆರೋಪದಲ್ಲಿ ಹುರುಳಿಲ್ಲ. ಚುನಾವಣಾ ಬಾಂಡ್ ಮೂಲಕ ಬಿಜೆಪಿ ಸಂಗ್ರಹಿಸಿದ ಹಣದ ಬಗ್ಗೆ ಅವರು ಮೊದಲು ಸ್ಪಷ್ಟನೆ ನೀಡಲಿ ಎಂದು ಸವಾಲು ಹಾಕಿದರು.

ADVERTISEMENT

ಇದಕ್ಕೆ ಧ್ವನಿಗೂಡಿಸಿದ ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ, ‘ಹಾಗಾದರೆ ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಂದ ಬಿಹಾರ ಚುನಾವಣೆಗೆ ಎಷ್ಟು ಹಣ ಕಳಿಸಲಾಗಿದೆ’ ಎಂದು ಪ್ರಶ್ನಿಸಿದರು.

ಯಾವುದೇ ಸಂಘ, ಸಂಸ್ಥೆಯಾದರೂ ಅನುಮತಿ ಪಡೆದ ಬಳಿಕವೇ ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಕಾರ್ಯಕ್ರಮ ಮಾಡಬೇಕು. ಅದಕ್ಕೆ ಸರ್ಕಾರದ ಅಭ್ಯಂತರ ಇಲ್ಲ. ಈ ನೆಲದ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಜಾರ್ಜ್‌, ಚಿತ್ತಾಪುರದ ಆರ್‌ಎಸ್‌ಎಸ್ ಪಥ ಸಂಚಲನ ಕುರಿತ ವಿವಾದಕ್ಕೆ ಸ್ಪಷ್ಟನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.