ADVERTISEMENT

KMF ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ: ಪೈಪೋಟಿಗಿಳಿದ ಸಿಎಂ, ಡಿಸಿಎಂ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 5:21 IST
Last Updated 11 ಫೆಬ್ರುವರಿ 2026, 5:21 IST
<div class="paragraphs"><p>ಡಿ.ಕೆ.ಸುರೇಶ್‌,&nbsp;ರಾಘವೇಂದ್ರ ಹಿಟ್ನಾಳ ಹಾಗೂ&nbsp;ಕೆ.ವೈ.ನಂಜೇಗೌಡ</p></div>

ಡಿ.ಕೆ.ಸುರೇಶ್‌, ರಾಘವೇಂದ್ರ ಹಿಟ್ನಾಳ ಹಾಗೂ ಕೆ.ವೈ.ನಂಜೇಗೌಡ

   

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರದ ಮೇಲಾಟಗಳ ನಡುವೆ ಹಾಲು ಮಹಾಮಂಡಳದ ಅಧ್ಯಕ್ಷ ಸ್ಥಾನದ ಚುನಾವಣೆ ಸಮೀಪಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರ ನಡುವೆ ಪೈಪೋಟಿ ಜೋರಾಗಿದೆ.

ಮೂವರ ಪೈಪೋಟಿ

ADVERTISEMENT

ಹಾಲು ಮಹಾಮಂಡಳದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಮೂವರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಬೆಂಗಳೂರು ಹಾಲು ಒಕ್ಕೂಟದ (ಬಮೂಲ್‌) ಅಧ್ಯಕ್ಷ ಡಿ.ಕೆ.ಸುರೇಶ್‌, ಬಳ್ಳಾರಿ, ಕೊಪ್ಪಳ– ರಾಯಚೂರು ಒಕ್ಕೂಟದ ಅಧ್ಯಕ್ಷ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವರು ಪ್ರಮುಖ ಆಕಾಂಕ್ಷಿಗಳು.

ಹಿಂದಿನ ಅವಧಿಯಲ್ಲಿ ನಿಮ್ಮ ಬೆಂಬಲಿಗರಿಗೆ ಅವಕಾಶ ಮಾಡಿಕೊಟ್ಟಿದ್ದರಿಂದ ಈ ಅವಧಿಗೆ ನಮ್ಮ ಕಡೆಯವರಿಗೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಸೋತಿರುವ ಸಹೋದರ ಡಿ.ಕೆ.ಸುರೇಶ್‌ ಅವರಿಗೆ ಕೆಎಂಎಫ್‌ ಚುಕ್ಕಾಣಿ ಕೊಡಿಸುವ ಇರಾದೆ ಶಿವಕುಮಾರ್‌ ಅವರದ್ದಾಗಿದೆ.

ಸಿದ್ದರಾಮಯ್ಯ ಅವರು ತಮ್ಮ ಆಪ್ತ ರಾಘವೇಂದ್ರ ಹಿಟ್ನಾಳ ಪರ ಗಟ್ಟಿಯಾಗಿ ನಿಂತಿದ್ದಾರೆ. ಸೋಮವಾರ ಹಿಟ್ನಾಳ ಅವರು ಮುಖ್ಯಮಂತ್ರಿ ಅವರನ್ನು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಹಿಂದಿನ ಅವಧಿಯಲ್ಲಿ ಅವಕಾಶ ತಪ್ಪಿದ್ದರಿಂದ ನನಗೂ ಒಂದು ಅವಕಾಶ ಮಾಡಿಕೊಡಿ ಎಂದು ನಂಜೇಗೌಡ ಅವರು ಬೇಡಿಕೆ ಇಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.